ಜುಲೈ 20 ರಂದು ಸಂಸತ್ ಚಲೋ ಮೆರವಣಿಗೆ ವೇಳೆ ಸಿಜೆಪಿ ಪ್ರತಿಭಟನಾಕಾರರ ಮೇಲೆ ನಡೆದಿದೆ ಎನ್ನಲಾದ ಪೊಲೀಸ್ ಹಿಂಸಾಚಾರಕ್ಕೆ ಕುರಿತಂತೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರಕಾರ ಹಾಗೂ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಮಾಡಿದೆ.
ಕೇಂದ್ರ ಸರಕಾರ ಮತ್ತು ದೆಹಲಿ ಪೊಲೀಸರಿಗೆ ನಾಲ್ಕು ವಾರಗಳೊಳಗೆ ಪ್ರತಿಜ್ಞಾಪತ್ರ ಸಲ್ಲಿಸುವಂತೆ ಸೂಚಿಸಿದೆ. ಘಟನೆಗೆ ಕುರಿತಂತೆ ಸಿಸಿಟಿವಿ ದೃಶ್ಯಗಳು, ವಿಡಿಯೋಗ್ರಫಿ, ಬಾಡಿ ಕ್ಯಾಮ್ ದೃಶ್ಯಗಳು ಹಾಗೂ ಇತರೆ ಎಲ್ಲಾ ದಾಖಲೆಗಳನ್ನು ಸಂರಕ್ಷಿಸುವಂತೆ ನ್ಯಾಯಾಲಯವು ಆದೇಶಿಸಿದೆ. ಸೆ.11 ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ.




