Home News Census: ನಾಳೆಯಿಂದ ಜಾತಿಗಣತಿ, ಸರ್ವೇ ಮಾಡುವ ಶಿಕ್ಷಕರಿಗೆ ಪರ್ಯಾಯ ರಜೆ ವ್ಯವಸ್ಥೆ

Census: ನಾಳೆಯಿಂದ ಜಾತಿಗಣತಿ, ಸರ್ವೇ ಮಾಡುವ ಶಿಕ್ಷಕರಿಗೆ ಪರ್ಯಾಯ ರಜೆ ವ್ಯವಸ್ಥೆ

Hindu neighbor gifts plot of land

Hindu neighbour gifts land to Muslim journalist

Census: ಸೆಪ್ಟೆಂಬರ್ 22ರಿಂದ ಸಾಮಾಜಿಕ (Socio) ಆರ್ಥಿಕ (Economic) ಶೈಕ್ಷಣಿಕ (Educational) ಸಮೀಕ್ಷೆ (census) ಆರಂಭಗೊಳ್ಳಲಿದ್ದು, ಈ ಸಂಬಂಧ ಮಧ್ಯೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಮಾತನಾಡಿ ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಕಡಿತವಾಗುವ ರಜೆಗಳನ್ನು ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದಂತೆ, ಬೇರೆ ರೀತಿಯಲ್ಲಿ ಒದಗಿಸಲು ಚಿಂತನೆ ನಡೆಸುವುದಾಗಿ’ ತಿಳಿಸಿದರು.

‘ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರನ್ನು ಬಳಸಿಕೊಳ್ಳುವುದರಿಂದ ಮಕ್ಕಳ ಕಲಿಕೆಗೆ ತೊಂದರೆ ಆಗಲ್ಲ. ದಸರಾ ರಜೆಯ ಸಂದರ್ಭದ 15 ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳಲಿದೆ ಇನ್ನು ಸಮೀಕ್ಷೆಯಲ್ಲಿ ಭಾಗವಹಿಸುವವರಿಗೆ ಸರ್ಕಾರ ಹೆಚ್ಚುವರಿ ಗೌರವ ಧನ ನೀಡಲಿದೆ. ಈ ಬಗ್ಗೆ ಶಿಕ್ಷಕರ ಸಂಘದ ಮುಖಂಡರ ಜೊತೆಗೆ ಚರ್ಚೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.