Home News Ambulance: ರಾಜ್ಯದಲ್ಲಿ ಓಲಾ, ಊಬರ್‌ ರೀತಿ ಆ್ಯಂಬುಲೆನ್ಸ್ ಸೇವೆ ಆರಂಭ!

Ambulance: ರಾಜ್ಯದಲ್ಲಿ ಓಲಾ, ಊಬರ್‌ ರೀತಿ ಆ್ಯಂಬುಲೆನ್ಸ್ ಸೇವೆ ಆರಂಭ!

Hindu neighbor gifts plot of land

Hindu neighbour gifts land to Muslim journalist

Ambulance: ಓಲಾ, ಊಬರ್‌ ಆ್ಯಪ್‌ ಬಳಸಿ ಟ್ಯಾಕ್ಸಿ ಹಾಗೂ ಆಟೋ ಬುಕ್‌ ಮಾಡುವಂತೆ ಇನ್ನು ಮುಂದೆ ರಾಜ್ಯದಲ್ಲಿ ಆ್ಯಂಬುಲೆನ್ಸ್‌ಗಳನ್ನು ಕೂಡ ಕರೆಸಬಹುದು. ಈಗಾಗಲೇ ಗುರುಗ್ರಾಮದಲ್ಲಿ ಖಾಸಗಿ ಕಂಪನಿಯೊಂದು ಇಂತಹ ಸೇವೆ ಆರಂಭಿಸಿದ್ದು, ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ಆ್ಯಂಬುಲೆನ್ಸ್‌ ಸೇವೆ ಕಲ್ಪಿಸಲು ಮುಂದಾಗಿದೆ.

ಈ ಆ್ಯಂಬುಲೆನ್ಸ್‌ಗಳಿಗೆ ಸರ್ಕಾರವೇ ದರ ನಿಗದಿ ಮಾಡಲಿದೆ. ಅಗತ್ಯ ಇರುವವರು ಮೊಬೈಲ್‌ ಆ್ಯಪ್‌ ಬಳಸಿ ಅವುಗಳ ಸೇವೆ ಪಡೆಯಬಹುದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಈ ಕುರಿತಂತೆ ಬರುವ ವಿಧಾನಸಭೆಯ ಅಧಿವೇಶನದಲ್ಲಿ ಕಾಯಿದೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ದಿನೇಶ್‌ ಗುಂಡೂರಾವ್‌ ಅವರು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕೆಪಿಎಇ ಅಡಿಯಲ್ಲಿ ನೋಂದಣಿಯಾಗುವ ಆ್ಯಂಬುಲೆನ್ಸ್‌ಗಳಿಗೆ ಅವುಗಳು ಒದಗಿಸುವ ಸೇವೆಯ ಆಧಾರದಲ್ಲಿ ದರ ನಿಗದಿಪಡಿಸಲಾಗುವುದು. ಆ್ಯಂಬುಲೆನ್ಸ್‌ ಸೇವೆಯ ಅಗತ್ಯವಿರುವವರು ಆ್ಯಪ್‌ ಮೂಲಕ ಬುಕಿಂಗ್ ಮಾಡುವ ಸೌಲಭ್ಯ ಒದಗಿಸಲಾಗುವುದು. ಈ ಮೂಲಕ ಆ್ಯಂಬುಲೆನ್ಸ್‌ ಸೇವೆಯಲ್ಲಿ ಪಾರದರ್ಶಕತೆ ತರಲಾಗುವುದು ಎಂದರು.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಆರೋಗ್ಯ ಇಲಾಖೆಯಲ್ಲಿ 5500 ಮಂದಿಯನ್ನು ಯಾವುದೇ ಶಿಫಾರಸು, ಹಸ್ತಕ್ಷೇಪವಿಲ್ಲದೇ ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ತಜ್ಞ ವೈದ್ಯರ ವೇತನ ಹೆಚ್ಚಳ ಮಾಡುವುದು ಮಾತ್ರವಲ್ಲದೆ ನೇಮಕಾತಿ ಕೂಡ ಮಾಡಲಾಗುತ್ತಿದೆ ಎಂದರು.

108 ಸೇವೆಯನ್ನು ಸಂಪೂರ್ಣ ರಾಜ್ಯ ಸರ್ಕಾರದ ವಶಕ್ಕೆ ತೆಗೆದುಕೊಳ್ಳಲಿದ್ದು, ಈಗಾಗಲೇ ಚಾಮರಾಜನಗರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಈ ಕಾರ್ಯ ಆರಂಭಿಸಲಿದೆ. ಇದು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಣೆಯಾಗಲಿದೆ. ಮುಂದಿನ ತಿಂಗಳು ಎಲ್ಲ ಜಿಲ್ಲೆಗಳಲ್ಲಿ ಕಂಟ್ರೋಲ್ ರೂಂ ತೆರೆದು, ನಮ್ಮ ಅಧಿಕಾರಿಗಳೇ 108 ಅನ್ನು ನಿರ್ವಹಣೆ ಮಾಡಲಿದ್ದಾರೆ. ಇದಕ್ಕಾಗಿ ಪ್ರತ್ಯೇಕ ಕಂಟ್ರೋಲ್ ರೂಂ ತೆರೆಯಲಾಗುವುದು ಎಂದರು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ : ಪಾಯಿಂಟ್ ಆರರಲ್ಲಿ ಅಸ್ಥಿಪಂಜರ ಅವಶೇಷ ಪತ್ತೆ : ಇದು ಪುರುಷನ ಮೂಳೆ ಎಂದ ಎಫ್ಎಸ್ಎಲ್