ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಸಂದರ್ಭದಲ್ಲಿ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಹಾಗಾಗಿ ಹೋಟೆಲ್‌ನಲ್ಲಿಯೇ ವೈದ್ಯರಿಂದ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವರದಿಯಾಗಿದೆ.
ಅಮಿತ್ ಶಾ ಅವರ ಜೊತೆ ಬಂದಿರುವ ವೈದ್ಯರ ತಂಡವೇ ಚಿಕಿತ್ಸೆ ನೀಡುತ್ತಿದೆ. ಅಮಿತ್ ಶಾ ಅವರಿಗೆ ಎರಡು ಗಂಟೆಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದು, ನಂತರ ಅವರು ಅಲ್ಲಿಂದ ನೇರವಾಗಿ ದೆಹಲಿಗೆ ತೆರಳುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಇದೆ.
ಹುಬ್ಬಳ್ಳಿಯ ಗಬ್ಬೂರು ಭಾಗದಲ್ಲಿ ನಿರ್ಮಿಸಲಾಗಿರುವ ಕೆಎಲ್‌ಇ ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರು ಸಾವಿರ ಮಠ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಕೆಎಲ್‌ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವನ್ನು ಅಮಿತ್ ಶಾ ಉದ್ಘಾಟಿಸುವ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು.
ಈ ನೂತನ ವೈದ್ಯಕೀಯ ಕ್ಯಾಂಪಸ್ 50ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿದ್ದು, 700 ಕೋಟಿ ರೂ.ವೆಚ್ಚಾಗಿದೆ. ಆಸ್ಪತ್ರೆಯಲ್ಲಿ 1200 ಹಾಸಿಗೆಗಳ ವ್ಯವಸ್ಥೆ ಇದೆ.
ಅಮಿತ್ ಶಾ ಅವರಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ ಕಾರಣ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಮುಂದುವರಿದಿದೆ.




