Home News Dharmasthala : ಧರ್ಮಸ್ಥಳದಲ್ಲಿ ಅನನ್ಯ ಭಟ್ ನಾಪತ್ತೆ ಪ್ರಕರಣ – ತಾಯಿ ಸುಜಾತ ಭಟ್ ನಾಪತ್ತೆ?...

Dharmasthala : ಧರ್ಮಸ್ಥಳದಲ್ಲಿ ಅನನ್ಯ ಭಟ್ ನಾಪತ್ತೆ ಪ್ರಕರಣ – ತಾಯಿ ಸುಜಾತ ಭಟ್ ನಾಪತ್ತೆ? ತನಿಖೆಗೆ ಸಾಕ್ಷಗಳ ಕೊರತೆ

Hindu neighbor gifts plot of land

Hindu neighbour gifts land to Muslim journalist

Dharmasthala : ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತಿಟ್ಟ ಪ್ರಕರಣದ ನಡುವೆ ಸುಮಾರು 20 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಅನನ್ಯ ಭಟ್ ಪ್ರಕರಣ ಕೂಡ ಸಾಕಷ್ಟು ಸದ್ದು ಮಾಡಿತ್ತು. ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ಇತ್ತೀಚಿಗೆ ಪೊಲೀಸರಿಗೆ ಈ ಕುರಿತಾಗಿ ದೂರು ನೀಡಿ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದರು. ಆದರೆ ಇದೀಗ ತನಿಖೆ ನಡೆಸಲು ತಾಯಿ ಸುಜಾತ ಅವರು ಪೊಲೀಸರ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ಸುಜಾತಾ ಭಟ್ ಇದೀಗ ತನಿಖಾಧಿಕಾರಿಗಳ ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳು ಸಿಗದಿರುವುದು ಪೊಲೀಸರನ್ನು ಗೊಂದಲಕ್ಕೀಡು ಮಾಡಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಅಲ್ಲದೆ ದೂರು ದಾಖಲಿಸಿದ ನಂತರ ಸುಜಾತಾ ಭಟ್ ಪೊಲೀಸರ ಸಂಪರ್ಕಕ್ಕೆ ಸಿಗಲಿಲ್ಲ. ಅವರ ಪರ ವಕೀಲರೂ ತನಿಖೆಗೆ ಸಹಕರಿಸಲಿಲ್ಲ. ಪೊಲೀಸರು ಅನನ್ಯಾ ಭಟ್ ಅವರ ಫೋಟೋ ಅಥವಾ ಯಾವುದೇ ದಾಖಲೆಗಳನ್ನು ಕೇಳಿದಾಗ, ‘ಮನೆಗೆ ಬೆಂಕಿ ಬಿದ್ದು ಎಲ್ಲವೂ ಸುಟ್ಟು ಹೋಗಿವೆ’ ಎಂದು ಸುಜಾತಾ ಭಟ್ ಹೇಳಿದ್ದಾರೆ. ಮಗಳ ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿ, ಕಾಲೇಜು ದಾಖಲೆಗಳು ಯಾವುವೂ ಅವರ ಬಳಿ ಇರಲಿಲ್ಲ. ಇದೇದಾಖಲೆಗಳಿಲ್ಲದೆ ತನಿಖೆ ಮುಂದುವರಿಸಲು ಪೊಲೀಸರಿಗೆ ಸಾಧ್ಯವಾಗಲಿಲ್ಲ ಎಂದು ಉಲ್ಲೇಖಿಸಲಾಗಿದೆ.

ಸುಜಾತಾ ಭಟ್ ನೀಡಿದ ದೂರಿನಲ್ಲಿ ಏನಿತ್ತು?

2003ರಲ್ಲಿ ತನ್ನ ಮಗಳು ಅನನ್ಯಾ ಭಟ್, ಮಣಿಪಾಲ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದಾಗ ಧರ್ಮಸ್ಥಳ ಪ್ರವಾಸಕ್ಕೆ ಹೋಗಿ ನಾಪತ್ತೆಯಾಗಿದ್ದಾಳೆ ಎಂದು ಸುಜಾತಾ ಭಟ್ ದೂರು ನೀಡಿದ್ದರು. ದೇವಸ್ಥಾನದ ಸಿಬ್ಬಂದಿ ನನ್ನ ಮಗಳನ್ನು ಕರೆದುಕೊಂಡು ಹೋಗಿದ್ದನ್ನು ಕೆಲವರು ನೋಡಿದ್ದಾರೆಂದು, ಬೆಳ್ತಂಗಡಿ ಠಾಣೆಗೆ ಹೋದಾಗ ಪೊಲೀಸರು ದೂರು ದಾಖಲಿಸಿಕೊಳ್ಳದೆ ಬೈದು ಕಳುಹಿಸಿದ್ದಾರೆಂದು ಆರೋಪಿಸಿದ್ದರು. ಅಲ್ಲದೆ, ವೀರೇಂದ್ರ ಹೆಗ್ಗಡೆ ಮತ್ತು ಅವರ ಸಹೋದರ ಹರ್ಷೇಂದ್ರ ಹೆಗ್ಗಡೆ ಅವರಿಂದಲೂ ತನಗೆ ನಿಂದನೆ ಆಗಿದೆ. ಅಂದು ರಾತ್ರಿ ದೇವಸ್ಥಾನದ ಸಿಬ್ಬಂದಿ ತನ್ನನ್ನು ಅಪಹರಿಸಿ, ಚಿತ್ರಹಿಂಸೆ ನೀಡಿ ತಲೆಗೆ ಹೊಡೆದಿದ್ದರಿಂದ ಮೂರು ತಿಂಗಳು ಕೋಮಾದಲ್ಲಿದ್ದೆ ಎಂದು ವಿವರಿಸಿದ್ದರು. ಅನಾಮಿಕ ದೂರುದಾರನ ವಿಷಯ ಗೊತ್ತಾದ ನಂತರ ತನ್ನ ಮಗಳ ಅಸ್ಥಿಪಂಜರ ಸಿಕ್ಕರೆ ಅದನ್ನು ತನಗೆ ನೀಡುವಂತೆ ಮನವಿ ಮಾಡಿದ್ದರು.

Fire Accident: ಸ್ಕೂಲ್ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ – ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ‌