

Kodagu: ಹಿಂದುಳಿದ ವರ್ಗಗಳ ಪ್ರವರ್ಗ-3ಎ ನಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಒಕ್ಕಲಿಗ, ವಕ್ಕಲಿಗ, ಸರ್ಪಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕಾರ್ ಒಕ್ಕಲಿಗ, ದಾಸ್‍ಒಕ್ಕಲಿಗ, ರೆಡ್ಡಿಒಕ್ಕಲಿಗ, ಮರಸು ಒಕ್ಕಲಿಗ, ಗೌಡ/ ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನಕೊಳಗ, ಉತ್ತಮಕೊಳಗ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗೆ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ), ಶೈಕ್ಷಣಿಕ ಸಾಲ ಯೋಜನೆ(ಹೊಸದು ಮತ್ತು ರಿನಿವಲ್), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ(ಹೊಸದು), ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಗಮವು ಅನುಷ್ಠಾನಗೊಳಿಸುವ ಈ ಯೋಜನೆಗಳಲ್ಲಿ ಶಾಸಕರು/ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ರವರ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿಗಳ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆಮಾಡಲಾಗುತ್ತದೆ.
ಸರ್ಕಾರದ ವಿವೇಚನಾ ಕೋಟಾ, ನಿಗಮದ ಅಧ್ಯಕ್ಷರು, ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‍ಲೈನ್‍ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು.
ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು.
2023-24 ಮತ್ತು 2024-25ನೇ ಸಾಲಿನಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸಿದ್ದು, ಆಯ್ಕೆ ಸಮಿತಿಗಳಲ್ಲಿ ಕಾರಣಾಂತರಗಳಿಂದ ಆಯ್ಕೆಯಾಗದೇ ಇರುವ ಅರ್ಹ ಅರ್ಜಿದಾರರು 2025-26ನೇ ಸಾಲಿನ ಪ್ರಕಟಣೆಗೆ ಅರ್ಜಿಯನ್ನು ಸಲ್ಲಿಸುವ ಅವಶ್ಯಕವಿರುವುದಿಲ್ಲ. ಕಳೆದ ಸಾಲುಗಳಲ್ಲಿ ಸಲ್ಲಿಸಿದ ಅರ್ಜಿಯನ್ನೇ ಆಯ್ಕೆ ಸಮಿತಿಗಳ ಮುಂದೆ ಆಯ್ಕೆಗೆ ಮತ್ತೊಮ್ಮೆ ಮಂಡಿಸಲಾಗುವುದು.
ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾಸಿಂಧು ಪೋರ್ಟಲ್ ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್‍ಗಳ ಮೂಲಕ ಆನ್‍ಲೈನ್‍ನಲ್ಲಿ ಮತ್ತು ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ಅಭಿವೃದ್ಧಿ ನಿಗಮದ ತಂತ್ರಾಶದ https://www.kaushalkar.com ನಲ್ಲಿ ಅರ್ಜಿಯನ್ನು ಜುಲೈ, 02 ರೊಳಗೆ ಸಲ್ಲಿಸುವುದು.
ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗೆ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಜಾಲ ತಾಣ https://kvcdc.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080-29904350, 29904268 ಅನ್ನು ಸಂಪರ್ಕಿಸುವುದು ಅಥವಾ ಹಾಗೂ ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ ಮಡಿಕೇರಿ ಇವರನ್ನು ದೂ.ಸಂ.08272-221656 ಮುಖಾಂತರ ಸಂಪರ್ಕಿಸಬಹುದು ಎಂದು ಕರ್ನಾಟಕ ಒಕ್ಕಲಿಗ ಸಮುದಾಯದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.













