Home News 2023-24 ನೇ ಸಾಲಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ನಿಮಗೊಂದು ಗುಡ್ ನ್ಯೂಸ್!

2023-24 ನೇ ಸಾಲಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ನಿಮಗೊಂದು ಗುಡ್ ನ್ಯೂಸ್!

Hindu neighbor gifts plot of land

Hindu neighbour gifts land to Muslim journalist

ರಾಜ್ಯ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಉಚಿತ ಶಿಕ್ಷಣ , ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಹೀಗೆ ಅನೇಕ ಸೌಲಭ್ಯ ಕಲ್ಪಿಸಿಕೊಟ್ಟಿದೆ. ಈ ನಡುವೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿಯೊಂದು ಲಭ್ಯವಾಗಿದೆ.

2023-24ನೇ ಸಾಲಿನ ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಜನವರಿ 5 ರಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಯಾವುದೇ ಶಾಲೆಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರು ತಮಗೆ ಸಮೀಪವಿರುವ ಜಿಲ್ಲೆಯ ಯಾವುದೇ ವಸತಿ ಶಾಲೆಗಳಿಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಜನವರಿ 22 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.

ಈ ಪ್ರವೇಶ ಪರೀಕ್ಷೆ ಮಾರ್ಚ್ 12ರಂದು ನಡೆಯಲಿದೆ. “ಮಾಹಿತಿ ಪುಸ್ತಕ-2023″ವನ್ನು ಪ್ರಾಧಿಕಾರದ ವೆಬ್‌ಸೈಟ್www.kea.kar.nic.in ನಲ್ಲಿ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ 080-23460460 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ SATS ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಇತರೆ ಮೀಸಲಾತಿಗೆ ಸಂಬಂಧಪಟ್ಟ ಪ್ರಮಾಣ ಪತ್ರಗಳ ಜೊತೆಗೆ ವಿದ್ಯಾರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಭಾವಚಿತ್ರದ ದಾಖಲೆಗಳು ಬೇಕಾಗುತ್ತವೆ. ಜನವರಿ 22ರ ಸಂಜೆ 5.30ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮಾರ್ಚ್ 12ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವೇಳೆ ತಾವು ದಾಖಲಾಗಲು ಇಚ್ಛಿಸುವ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಬೇಕಾಗುತ್ತದೆ. ಅಭ್ಯರ್ಥಿಯ ಮೆರಿಟ್, ಮೀಸಲಾತಿ ಹಾಗೂ ಪ್ರವೇಶ ಬಯಸುವ ಶಾಲೆಗಳ ಆದ್ಯತಾ ಕ್ರಮದ ಮೇಲೆ Computerised Auto Selection ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ.