Home » Ration Card : ಫೆಬ್ರವರಿಯಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ – ಸಚಿವ ಮುನಿಯಪ್ಪ ಘೋಷಣೆ !!

Ration Card : ಫೆಬ್ರವರಿಯಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ – ಸಚಿವ ಮುನಿಯಪ್ಪ ಘೋಷಣೆ !!

0 comments

Ration Card : ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡಿದಾಗಿನಿಂದ ಸಾಕಷ್ಟು ಬಡವರು ಬಿಪಿಎಲ್‌ ಕಾರ್ಡ್‌ ಅರ್ಜಿ ಸಲ್ಲಿಸಲು (BPL Card Application) ಆಗುತ್ತಿಲ್ಲ. ಆದರೆ ಇದೀಗ ಫೆಬ್ರವರಿ ಇಂದ ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರು ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಮಾಹಿತಿ ನೀಡಿದೆ.

 

ಹೌದು, ವರ್ಷದಿಂದಲೂ ಪಡಿತರ ಚೀಟಿ ಪರಿಷ್ಕರಿಸುವ ಕೆಲಸ ಆಗುತ್ತಿದೆ. ಈಗಾಗಲೇ ನಾಲ್ಕು ಲಕ್ಷಕ್ಕೂ ಅಧಿಕ ಕಾರ್ಡ್‌ಗಳನ್ನು ಎಪಿಎಲ್‌ಗೆ ಪರಿವರ್ತಿಸಿದ್ದು, ಈ ಮೂಲಕ ಸರ್ಕಾರಕ್ಕೆ ಕೋಟ್ಯಂತರ ಹಣ ಉಳಿತಾಯ ಆದಂತೆ ಆಗಿದೆ. ಈ ಕುರಿತಾಗಿ ಮಾತನಾಡಿದ ಆಹಾರ ಸಚಿವ ಕೆಎಚ್ ಮುನಿಯಪ್ಪ ಅವರು ಅನರ್ಹ ಕಾರ್ಡ್‌ಗಳನ್ನು ಗುರುತಿಸಿ ಎಪಿಎಲ್‌ಗೆ ಬದಲಿಸುವ ಕಾರ್ಯ ನಡೆದಿದೆ. ಹಾಗೆಂದು ಹೊಸ ಅರ್ಜಿಗಳ ಸ್ವೀಕಾರವನ್ನು ನಿಲ್ಲಿಸಿಲ್ಲ. ಫೆಬ್ರುವರಿ ತಿಂಗಳಿಂದ ಹೊಸ ಪಡಿತರ ಚೀಟಿಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗುತ್ತದೆ’ ಎಂದು ತಿಳಿಸಿದರು.

You may also like