ಸೋಮವಾರ, 26 ಅಕ್ಟೋಬರ್ 2026
Trending

ತಮ್ಮ ವಿರುದ್ಧದ ಬಂಧನ ವಾರಂಟ್‌ ಸುಳ್ಳುಸುದ್ದಿ; ಪ್ರಕಾಶ್‌ ರಾಜ್‌ ಸ್ಪಷ್ಟನೆ

Prakash Raj

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಹರಿದಾಡುತ್ತಿರುವ ಬಂಧನ ವಾರಂಟ್‌ ಕುರಿತು ನಟ ಪ್ರಕಾಶ್‌ ರಾಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಇದೆಲ್ಲವೂ ಸಂಪೂರ್ಣ ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ.

Sponsored

ತಮ್ಮನ್ನು ಮಾರಿಕೊಂಡಿರುವ ಕೆಲವರು ಸಮಾಜದಲ್ಲಿ ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ಪ್ರಕಾಶ್‌ ರಾಜ್‌ ಆಕ್ರೋಶ್‌ ವ್ಯಕ್ತಪಡಿಸಿರುವ ಕುರಿತು ವರದಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಸೆಲೆಬ್ರೆಟಿಗಳು ಹಾಗೂ ಸಾರ್ವಜನಿಕ ರಂಗದಲ್ಲಿ ಗುರುತಿಸಿಕೊಂಡಿವರ ವಿರುದ್ಧ ಇಂತಹ ನಕಲಿ ಸುದ್ದಿಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಇದನ್ನು ನಂಬಬಾರದು ಎಂದು ವಿನಂತಿ ಮಾಡಿದ್ದಾರೆ. ಸತ್ಯಾಸತ್ಯತೆಯನ್ನು ಪರಿಶೀಲನೆ ಮಾಡದೆ ಇಂತಹ ವದಂತಿಗಳನ್ನು ಹರಡದಂತೆ ಅವರು ಎಚ್ಚರಿಸಿದ್ದಾರೆ.