ಶನಿವಾರ, 24 ಅಕ್ಟೋಬರ್ 2026

ಎ.ಎಸ್. ಪೊನ್ನಣ್ಣಗೆ ಮಹತ್ವದ ಜವಾಬ್ದಾರಿ: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ

ಬೆಂಗಳೂರು: ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌

ರಾಜ್ಯ ಸರ್ಕಾರದ ಆದೇಶದಂತೆ ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿ ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅವರು ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.ಪೊನ್ನಣ್ಣ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗಿದ್ದು, ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ರಾಜ್ಯ ಶಿಷ್ಟಾಚಾರ ವಿಭಾಗ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌

ಈ ನೇಮಕಾತಿಯೊಂದಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಪೊನ್ನಣ್ಣ ಅವರ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ.