Home News Gruhalakshmi: ಗೃಹಲಕ್ಷ್ಮಿ ಹಣವನ್ನು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ

Gruhalakshmi: ಗೃಹಲಕ್ಷ್ಮಿ ಹಣವನ್ನು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ

Hindu neighbor gifts plot of land

Hindu neighbour gifts land to Muslim journalist

Gruhalakshmi: ಆಶಾ ಕಾರ್ಯಕರ್ತೆ ಗಂಗಮ್ಮ ಲಗುಬಿಗಿ ಅವರು ರಾಜ್ಯ ಸರ್ಕಾರದ ನೀಡುವ ಗೃಹಲಕ್ಷ್ಮಿ (Gruhalakshmi) ಯೋಜನೆಯ 12 ತಿಂಗಳ ಹಣವನ್ನು ಕೂಡಿಟ್ಟು 24 ಸಾವಿರ ಹಣವನ್ನು ಶಾಲೆಗೆ ಅಭಿವೃದ್ದಿಗೆ ನೀಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಐರಣಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಆಶಾ ಕಾರ್ಯಕರ್ತೆ ಗಂಗಮ್ಮ ಲಗುಬಿಗಿ ಅವರು ಸರ್ಕಾರ ಗೃಹಲಕ್ಷ್ಮಿ ಯೋಜನೆ ಹಣವನ್ನು ಉಳಿಸಿ 24,000 ಹಣವನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ದಿಗೆ ನೀಡಿದ್ದಾರೆ.

ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಕಾರಣ ಮಕ್ಕಳಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಹಣ ನೀಡಿದೆ ಎಂದು ಗಂಗಮ್ಮ ತಿಳಿಸಿದ್ದಾರೆ.