ಶನಿವಾರ, 24 ಅಕ್ಟೋಬರ್ 2026

ಅಯೋಧ್ಯೆ ದೇಣಿಗೆ ಹಗರಣ- ಮೌನ ಮುರಿದ RSS

ಹಿಂದುಗಳ ಪವಿತ್ರ ಧಾರ್ಮಿಕ ಕ್ಷೇತ್ರವಾಗಿರುವ ಅಯೋಧ್ಯ ರಾಮಮಂದಿರದಲ್ಲಿ ದೇಣಿಗೆ ಹಗರಣ ನಡೆದಿರುವುದು ಇಡೀ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಇದುವರೆಗೂ ಸುಮ್ಮನಿದ್ದ ಆರ್ ಎಸ್ ಎಸ್ ಇದೀಗ ಮೌನ ಮರಿದಿದೆ.

ಅಯೋಧ್ಯೆಯ ರಾಮ ಮಂದಿರದ ದೇಣಿಗೆಯಿಂದ ಕೋಟ್ಯಂತರ ರೂಪಾಯಿ ಲೂಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಆರ್‌ಎಸ್‌ಎಸ್‌ ಮೌನ ಮುರಿದಿದ್ದು, ದೇಣಿಗೆಗಳಿಂದ ಹಣ ಕಳುವಾಗಿರುವ ಘಟನೆಯು ಕೋಟ್ಯಂತರ ರಾಮಭಕ್ತರ ಶ್ರದ್ಧೆ ಹಾಗೂ ನಂಬಿಕೆಗೆ ನೋವಾಗಿದೆ. ಈ ಘಟನೆಯಿಂದ ನಾವೆಲ್ಲರೂ ತೀವ್ರವಾಗಿ ನೊಂದಿದ್ದೇವೆ ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ(Dattatreya Hosabale) ಅವರು ಹೇಳಿದ್ದಾರೆ.

ಅಲ್ಲದೆ ಮಂದಿರದ ಆಡಳಿತ ಮಂಡಳಿ ಹಾಗೂ ಎಸ್‌ಐಟಿ ತನಿಖಾ ತಂಡವು ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಅಗತ್ಯವಿರುವ ಎಲ್ಲಾ ಕಠಿಣ ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕು. ಸಾರ್ವಜನಿಕರಲ್ಲಿ ಸದ್ಯ ಮೂಡಿರುವ ಗೊಂದಲ ಮತ್ತು ಅನಿಶ್ಚಿತತೆಗೆ ಆಡಳಿತ ಮಂಡಳಿ ಶೀಘ್ರವಾಗಿ ತೆರೆ ಎಳೆಯಬೇಕು. ಈ ಕಠಿಣ ಸಮಯದಲ್ಲಿ ಇಡೀ ಹಿಂದೂ ಸಮಾಜವು ಅಗತ್ಯ ಸಂಯಮ ಮತ್ತು ತಾಳ್ಮೆಯನ್ನು ಪ್ರದರ್ಶಿಸಬೇಕು. ಈ ದುರದೃಷ್ಟಕರ ಘಟನೆಯನ್ನು ದುರುಪಯೋಗಪಡಿಸಿಕೊಂಡು ಹಿಂದೂ ಧರ್ಮ ಮತ್ತು ಸಮಾಜವನ್ನು ಜಗತ್ತಿನ ಮುಂದೆ ತೇಜೋವಧೆ ಮಾಡಲು ಹೊಂಚು ಹಾಕುತ್ತಿರುವ ಹಿಂದೂ ವಿರೋಧಿ ಹಾಗೂ ದೇಶ ವಿರೋಧಿ ಶಕ್ತಿಗಳ ಸಂಚನ್ನು ಭಕ್ತರು ವಿಫಲಗೊಳಿಸಬೇಕು ಎಂದು ಹೊಸಬಾಳೆ ಅವರು ಮನವಿ ಮಾಡಿದ್ದಾರೆ

ಜೊತೆಗೆ ದೇವಸ್ಥಾನದಲ್ಲಿ ದೋಷರಹಿತ, ಪಾರದರ್ಶಕ ಹಣಕಾಸು ನಿರ್ವಹಣೆ ಮತ್ತು ಧಾರ್ಮಿಕ ಪವಿತ್ರತೆಯ ವಾತಾವರಣವನ್ನು ಕಾಪಾಡಿಕೊಳ್ಳುವ ಮೂಲಕ ಭಕ್ತರ ನಂಬಿಕೆಯನ್ನು ಟ್ರಸ್ಟ್‌ ಮತ್ತಷ್ಟು ಗಟ್ಟಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.