ಶನಿವಾರ, 24 ಅಕ್ಟೋಬರ್ 2026

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆಯುಷ್ ಪ್ರಭುಗೆ ದ್ವಿತೀಯ ಸ್ಥಾನ

ಮಡಂತ್ಯಾರು: ಕೊಕ್ರಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 27ರಂದು ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಆಯುಷ್ ಪ್ರಭು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಯೋಗಾಸನ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಯುಷ್ ಪ್ರಭು ಅವರ ಸಾಧನೆಗೆ ಶಾಲೆಯ ದೈಹಿಕ ಶಿಕ್ಷಕರಾದ ವಲೇರಿಯನ್ ಡಿಸೋಜ ಹಾಗೂ ಮಂಜುನಾಥ ಅವರು ಮಾರ್ಗದರ್ಶನ ಮತ್ತು ಸಹಕಾರ ನೀಡಿದ್ದರು.

ಆಯುಷ್ ಅವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ಸಹಪಾಠಿಗಳು ಅಭಿನಂದನೆ ಸಲ್ಲಿಸಿದ್ದಾರೆ.