Home » ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ: ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ, ಅವಧಿ ವಿಸ್ತರಣೆ ಇಲ್ಲ

ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ: ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ, ಅವಧಿ ವಿಸ್ತರಣೆ ಇಲ್ಲ

0 comments

ಬೆಂಗಳೂರು: ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತಿಸಲು ಸರ್ಕಾರ ನೀಡಿರುವ ರಿಯಾಯಿತಿ ಅವಧಿ ನಾಳೆ (ಆ.23)ಕ್ಕೆ ಅಂತ್ಯವಾಗಲಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಹೆಚ್ಚುವರಿ ಕಾಲಾವಕಾಶ ನೀಡುವುದಿಲ್ಲ ಎಂದು ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಸ್ಪಷ್ಟಪಡಿಸಿದ್ದಾರೆ.

ಹಬ್ಬಕ್ಕೂ ಮುನ್ನವೇ ಗ್ರಾಹಕರಿಗೆ ಶಾಕಿಂಗ್‌: ಸಕ್ಕರೆ, ಬೆಲ್ಲದ ದರ ಕೆಜಿಗೆ 75 ರೂ.ಗೆ ಹೆಚ್ಚಳ

ಎ ಖಾತಾ ಪರಿವರ್ತನೆಗೆ ಈವರೆಗೆ ಸುಮಾರು 70 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಬೆಂಗಳೂರಿನಲ್ಲಿ ಸುಮಾರು 7.5 ಲಕ್ಷ ಬಿ ಖಾತಾ ಆಸ್ತಿಗಳಿದ್ದರೂ, ಅರ್ಜಿ ಸಲ್ಲಿಕೆ ಪ್ರಮಾಣ ನಿರೀಕ್ಷೆಗಿಂತ ಕಡಿಮೆಯಾಗಿದೆ. ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಸುಮಾರು 20 ಸಾವಿರ ಅರ್ಜಿಗಳಿಗೆ ಎ ಖಾತಾ ಮಂಜೂರಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ದರದ ಶೇ.2ರಷ್ಟು ಶುಲ್ಕ ಪಾವತಿಸಿ ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು. ಅರ್ಜಿ ಸಲ್ಲಿಕೆಗೆ ಭಾನುವಾರ (ಆ.23) ಕೊನೆಯ ಅವಕಾಶವಾಗಿದ್ದು, ಬಳಿಕ ಸರ್ಕಾರದ ರಿಯಾಯಿತಿ ಆಫರ್ ಮುಕ್ತಾಯಗೊಳ್ಳಲಿದೆ.

ಹಬ್ಬಕ್ಕೂ ಮುನ್ನವೇ ಗ್ರಾಹಕರಿಗೆ ಶಾಕಿಂಗ್‌: ಸಕ್ಕರೆ, ಬೆಲ್ಲದ ದರ ಕೆಜಿಗೆ 75 ರೂ.ಗೆ ಹೆಚ್ಚಳ

ಈ ಬಾರಿ ಕೂಡ ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಮಾಡಿಕೊಳ್ಳಲು ಆಸ್ತಿ ಮಾಲೀಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.

You may also like