ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸುವ ಬೆಳವಣಿಗೆ ನಡೆದಿದೆ. ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಗುರುವಾರ ಸಂಜೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ನಾಗೇಂದ್ರ, ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ. ಸರ್ಕಾರ ಮತ್ತು ಪಕ್ಷಕ್ಕೆ ಯಾವುದೇ ಮುಜುಗರ ಉಂಟಾಗದಂತೆ ಸ್ವತಃ ರಾಜೀನಾಮೆ ನೀಡಲು ಅವರು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೆ ನಾಗೇಂದ್ರ ಅವರ ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸುವ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ರಾಜೀನಾಮೆ ಸ್ವೀಕರಿಸುವುದರಿಂದ ಪಕ್ಷದ ಮೇಲೆ ಆಗಬಹುದಾದ ರಾಜಕೀಯ ಪರಿಣಾಮಗಳ ಕುರಿತು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಚರ್ಚೆ ನಡೆಸುತ್ತಿದ್ದಾರೆ.
ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.
ನಾಗೇಂದ್ರ ಅವರ ರಾಜೀನಾಮೆ ಅಂಗೀಕಾರವಾಗುತ್ತದೆಯೇ ಅಥವಾ ಅವರು ಸಚಿವ ಸ್ಥಾನದಲ್ಲೇ ಮುಂದುವರಿಯುತ್ತಾರೆಯೇ ಎಂಬುದು ಇದೀಗ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
Sponsored



