Home News Saina Nehwal: ‘ಗಾಯತ್ರಿ ಅಡುಗೆ ಮಾಡಲು ಲಾಯಕ್ಕು’ ಹೇಳಿಕೆ – ಶಾಮನೂರು ಶಿವಶಂಕರಪ್ಪ ವಿರುದ್ಧ ಸಿಡಿದೆದ್ದ...

Saina Nehwal: ‘ಗಾಯತ್ರಿ ಅಡುಗೆ ಮಾಡಲು ಲಾಯಕ್ಕು’ ಹೇಳಿಕೆ – ಶಾಮನೂರು ಶಿವಶಂಕರಪ್ಪ ವಿರುದ್ಧ ಸಿಡಿದೆದ್ದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ !!

Saina Nehwal
Image Credit Source: ಪ್ರಜಾವಾಣಿ

Hindu neighbor gifts plot of land

Hindu neighbour gifts land to Muslim journalist

Saina Nehwal: ರಾಜ್ಯದ ಹಿರಿಯ ರಾಜಕಾರಣಿ ಮಾಜಿ ಸಚಿವ, ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ(Shamanuru Shivashankarappa) ತಮ್ಮ ದಾವಣಗೆರೆ(Davanegere) ಲೋಕಸಭಾ ಕ್ಷೇತ್ರದ ಎದುರಾಳಿ ಮಹಿಳೆ ಗಾಯತ್ರಿ ಸಿದ್ದೇಶ್ವರ್(Gayatri Siddeshwar) ಬಗ್ಗೆ ಹಗುರವಾಗಿ ಮಾತನಾಡಿದ ವಿಚಾರ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದೀಗ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್(Saina Nehwal) ಕೂಡ ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೌದು, ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ ಲಾಯಕ್ಕು. ಅವರಿಗೆ ಮಾತನಾಡುವ ಶಕ್ತಿ ಇಲ್ಲ’ ಎಂದು ಸಂಸದ ಸಿದ್ದೇಶ್ವರ್‌ ಪತ್ನಿ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರ ಹೇಳಿಕೆಗೆ ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌ (Saina Nehwal) ಕಿಡಿ ಕಾರಿದ್ದು ಶಾಮನೂರು ಅವರನ್ನ ʻಸ್ತ್ರೀ ದ್ವೇಷಿʼ ಎಂದು ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ಕೀಳು ಅಭಿರುಚಿಯ ಹೇಳಿಕೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: K S Eshwarappa: ಅಖಿಲೇಶ್ ಯಾದವ್ ರಿಂದ ಬಂತು ಕರೆ, BSP ಸೇರ್ಪಡೆ ಆಗ್ತಾರಾ ಈಶ್ವರಪ್ಪ ?!

ಕುರಿತು ವಿರೋಧ ವ್ಯಕ್ತಪಡಿಸಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ನೆಹ್ವಾಲ್, ‘ ಮಹಿಳೆಯನ್ನ ಅಡುಗೆ ಕೋಣೆಗೆ ಸೀಮಿತಿಗೊಳಿಸಬೇಕು ಎಂದು ಕಾಂಗ್ರೆಸ್‌ನ ಕರ್ನಾಟಕದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಬಯಸಿದ್ದಾರೆ. ಆದರೆ, ಪ್ರತಿ ಮಹಿಳೆಯೂ ಹೋರಾಟ ಮಾಡಬಲ್ಲಳು ಎಂಬ ತತ್ವದಲ್ಲಿ ನಂಬಿಕೆ ಇಟ್ಟಿರುವ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಗಾಯತ್ರಿ ಸಿದ್ದೇಶ್ವರ ಅವರು ಕಣದಲ್ಲಿದ್ದಾರೆ ” ಎಂದಿದ್ದಾರೆ.

ಅಲ್ಲದೆ ಸಮಾಜದಲ್ಲಿ ಮಹಿಳೆ ಅಬಲೆ ಅಲ್ಲ ಸಬಲೆ. ಪುರುಷರಂತೆ ಎಲ್ಲಾ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂದು ಕಾಂಗ್ರೆಸ್​ ಅಭಿಯಾನವೊಂದನ್ನು ಆರಂಭಿಸಿತ್ತು. ಆದರೆ ಕರ್ನಾಟಕದ ಹಿರಿಯ ಕಾಂಗ್ರೆಸ್​ ನಾಯಕರೊಬ್ಬರು ಮಹಿಳೆಯರ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ. ಇದು ಕಾಂಗ್ರೆಸ್​ನ ನಿಜವಾದ ಮನಸ್ಥಿಯನ್ನು ತೋರಿಸುತ್ತದೆ. ಒಂದು ಕಡೆ ನಾವು ನಾರಿ ಶಕ್ತಿಗೆ ನಮನ ಸಲ್ಲಿಸುತ್ತೇವೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹಿಳಾ ಮೀಸಲಾತಿ ಕಾಯ್ದೆಯನ್ನು ಪಾಸ್ ಮಾಡಲಾಗಿದೆ. ಮತ್ತೊಂದೆಡೆ ಈ ನಾರಿಶಕ್ತಿಗೆ ಅವಮಾನ ಮಾಡುವ ಕೆಲಸ ಆಗುತ್ತಿದೆ. ನಮ್ಮ ನಡುವೆ ಎಂತಹ ಜನರಿದ್ದಾರೆ. ಎಂದು ಶಿವಶಂಕರಪ್ಪ ಹೇಳಿಕೆಯನ್ನು ಖಂಡಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?
ದಾವಣಗೆರೆ ಬಂಟರ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಕಾಂಗ್ರೆಸ್‌ ಸಭೆಯಲ್ಲಿ ಮಾತನಾಡಿದ ಶಾಮನೂರು ಅವರು ಗಾಯತ್ರಿ ಸಿದ್ದೇಶ್ವರ್‌ ಮೇಲೆ ತೀವ್ರ ವಾಗ್ದಾಳಿ ನಡೆಸಿ, ಮಾತನಾಡಲು ಬಾರದ ಗಾಯತ್ರಿ ಸಿದ್ದೇಶ್ವರ್‌ ಅವರು ಅಡುಗೆ ಮಾಡುವುದಕ್ಕೆ ಲಾಯಕ್ಕು. ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ಶಕ್ತಿ ಅವರಿಗಿಲ್ಲ. ಹೀಗಾಗಿ ನಮ್ಮ ಕಾಂಗ್ರೆಸ್ಸಿಗರ ‘ಕೈ’ ಮೇಲಿದೆ ಎಂಬುದನ್ನು ನಾವು ತೋರಿಸಬೇಕು ಎಂದು ಹೇಳಿದ್ದರು.