Home » ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಗಲಾಟೆ; ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಾಠಿಚಾರ್ಜ್

ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಗಲಾಟೆ; ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಾಠಿಚಾರ್ಜ್

0 comments

ಬಾಗಲಕೋಟೆ :ನಗರದ ವಿದ್ಯಾಗಿರಿ ಇಂಜಿನಿಯರಿಂಗ್ ಕಾಲೇಜು ಸರ್ಕಲ್ ಬಳಿ ಭಾನುವಾರ ರಾತ್ರಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ ನಡೆದಿದೆ.

ವೇದಿಕೆಯಲ್ಲಿ ಹಾಡು ಹಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಆರಂಭವಾಗಿದ್ದು, ಬಳಿಕ ವಾಗ್ವಾದ ತಾರಕಕ್ಕೇರಿ ಪರಸ್ಪರ ಮಾರಾಮಾರಿಗೆ ತಿರುಗಿದೆ.

ಕಾರ್ಯಕ್ರಮ ವೀಕ್ಷಿಸಲು ನೂರಾರು ಮಂದಿ ಸೇರಿದ್ದರಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದ ಪೊಲೀಸರು ಲಾಠಿಚಾರ್ಜ್ ನಡೆಸಿ ಗುಂಪನ್ನು ಚದುರಿಸಿದರು.

ಪೊಲೀಸರ ಸಮಯೋಚಿತ ಮಧ್ಯಪ್ರವೇಶದಿಂದ ಯಾವುದೇ ದೊಡ್ಡ ಅನಾಹುತ ಸಂಭವಿಸದೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿಸಲಾಗಿದೆ.

You may also like