Home News Madhu Bangarappa: ಬಗರ್ ಹುಕುಂ ಸಾಗುವಳಿ, ಮುಳುಗಡೆ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್!

Madhu Bangarappa: ಬಗರ್ ಹುಕುಂ ಸಾಗುವಳಿ, ಮುಳುಗಡೆ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್!

Madhu Bangarappa

Hindu neighbor gifts plot of land

Hindu neighbour gifts land to Muslim journalist

Madhu Bangarappa: ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ ಅವರು, ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ. ಆದ್ದರಿಂದ ಯಾವುದೇ ರೈತರು ಧೃತಿಗೆಡಬಾರದು. ಸರ್ಕಾರ ರೈತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.

ಮುಖ್ಯವಾಗಿ ಅ.21 ಕ್ಕೆ ಸಾಗರದಲ್ಲಿ ಅರಣ್ಯ ಭೂಮಿ ಸಮಸ್ಯೆ ಕುರಿತು ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ ಸರ್ಕಾರ ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ಬಗರ್‌ ಹುಕುಂ ಸಾಗುವಳಿದಾರರ ಪರವಾಗಿ ಕೆಲಸ ಮಾಡುತ್ತಿದೆ ಎಂದರು. ಇನ್ನು ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಉತ್ತಮ ನ್ಯಾಯವಾದಿಗಳನ್ನು ನೇಮಿಸಿ ಐಎ ಹಾಕಲಾಗುವುದು. ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿ ಮತ್ತು ನ್ಯಾಯ ಒದಗಿಸಲು ಎಲ್ಲ ಪ್ರಯತ್ನವನ್ನು ಸರ್ಕಾರ ನಡೆಸುತ್ತಿದೆ. ಕೋರ್ಟ್ ವಿಚಾರ ಸೂಕ್ಷ್ಮವಾಗಿದ್ದು, ಹುಷಾರಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಇಂದಿನ ಸಮಸ್ಯೆಯಲ್ಲ. ಹಾಗಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಸಂತ್ರಸ್ತರು ಧೃತಿಗೆಡಬಾರದು ಎಂದರು. ಒಟ್ಟಿನಲ್ಲಿ ಶೀಘ್ರದಲ್ಲಿ ರೈತರಿಗೆ ಒಳ್ಳೆಯ ಸುದ್ದಿಯನ್ನೇ ನಿಡುತ್ತೇವೆ ಎಂದಿದ್ದಾರೆ.

ಈಗಾಗಲೇ ಮುಳುಗಡೆಗೆ ಸಂಬಂಧಪಟ್ಟಂತೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆ ಹೋರಾಟ ನಡೆಯುತ್ತಿದೆ. ರೈತರಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದಲೇ ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಒಪ್ಪಿಲ್ಲ. ಬಗರ್‌ಹುಕುಂ ಸಾಗುವಳಿದಾರರ ಪರವಾಗಿ ಸರ್ಕಾರ ಕೆಲಸ ಮಾಡುತ್ತಿದೆ. 2015 ರೊಳಗೆ 3 ಎಕರೆ ಒಳಗೆ ಸಾಗುವಳಿ ಮಾಡುತ್ತಿರುವ ರೈತರಿಗೆ ಯಾವುದೇ ರೀತಿಯ ನೋಟಿಸ್ ನೀಡುವುದು, ತೊಂದರೆ ನೀಡದಂತೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾಗೂ ಎಲ್ಲ ರೀತಿಯ ಭೂ ಕಬಳಿಕೆ ಪ್ರಕರಣ ನಿರ್ವಹಿಸಲು ಜನಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡ ಅರಣ್ಯ ಸಮಿತಿ ರಚನೆ ಮಾಡಲಾಗುವುದು ಎಂದು ತಿಳಿಸಿದರು.

ಇನ್ನು ತುಂಗಾ ನದಿಗೆ ಕಲುಷಿತ ನೀರು ಹೋಗದಂತೆ ಕ್ರಮ ವಹಿಸಲು ಸಮಿತಿ ರಚಿಸಲಾಗುವುದು. ನದಿ ಈಗಾಗಲೇ ಸಾಕಷ್ಟು ಕಲುಷಿತವಾಗಿದೆ. ಮುಂದೆ ಆಗದಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದೆ ಕೆಟ್ಟ ಪರಿಸ್ಥಿತಿ ಎದುರಾಗಲಿದೆ. ಆದ್ದರಿಂದ ನದಿ ಸಂರಕ್ಷಣೆಗೆ ಶಾಶ್ವತ ಪರಿಹಾರದ ಕುರಿತು ಪಕ್ಷಾತೀತವಾಗಿ ಯೋಚಿಸಲಾಗುತ್ತಿದೆ. ಬೃಹತ್ ನೀರಾವರಿ ಮತ್ತು ಪಾಲಿಕೆ ಅಧಿಕಾರಿಗಳು ಈ ಕುರಿತು ಸಭೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.