Home latest ಪ್ರೇಮಿಗಳ ದಿನಾಚರಣೆಗೆ ಭಜರಂಗದಳ ವಿರೋಧ

ಪ್ರೇಮಿಗಳ ದಿನಾಚರಣೆಗೆ ಭಜರಂಗದಳ ವಿರೋಧ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ಫೆಬ್ರವರಿ 14ರಂದು ಆಚರಿಸುವ ಪ್ರೇಮಿಗಳ ದಿನಾಚರಣೆಗೆ ಭಜರಂಗದಳವು ವಿರೋಧ ವ್ಯಕ್ತಪಡಿಸಿದ್ದು ಈ ದಿನಾಚರಣೆಗೆ ಪ್ರೇರೇಪಿಸುವ ವಸ್ತುಗಳನ್ನು ಮಾರಾಟ ಮಾಡಬಾರದು ಎಂದು ಅಂಗಡಿಯವರಿಗೆ ಮನವಿ ಸಲ್ಲಿಸಿದೆ.

ಭಾರತ ದೇಶವು ವಿಶಿಷ್ಟವಾದ ಸಂಸ್ಕೃತಿ ಸಂಸ್ಕಾರವನ್ನು ಹೊಂದಿದ ಪುಣ್ಯಭೂಮಿಯಾಗಿದ್ದು ನಮ್ಮ ಸಂಸ್ಕೃತಿ ಆಚರಣೆಗಳು ಶತಮಾನಗಳ ಇತಿಹಾಸವನ್ನು ಹೊಂದಿದ್ದು ಅದರದೇ ಆದ ಮಹತ್ವವಿದೆ.

ಆದರೆ ಪಾಶ್ಚಿಮಾತ್ಯ ಸಂಸ್ಕೃತಿಗಳು ಭಾರತೀಯ ಸಂಸ್ಕೃತಿಗಳ ಮೇಲೆ ದಾಳಿ ಮಾಡುತ್ತಿದ್ದು ಯುವ ಸಮುದಾಯವನ್ನು ತನ್ನೆಡೆಗೆ ಎಳೆದುಕೊಳ್ಳುವ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಸ್ಪಷ್ಟ ಉದಾಹರಣೆ ಪ್ರೇಮಿಗಳ ದಿನ. ಆದ್ದರಿಂದ ಬಜರಂಗದಳ ಪ್ರೇಮಿಗಳ ದಿನಾಚರಣೆಯನ್ನು ವಿರೋಧಿಸುವುದಲ್ಲದೆ ಪ್ರೇಮಿಗಳ ದಿನಾಚರಣೆ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಯುವುದನ್ನು ತೀವ್ರವಾಗಿ ವಿರೋಧಿಸುತ್ತದೆ ಎಂದು ಹೇಳಿದೆ.

ಭಾರತೀಯ ಪರಂಪರೆಯಲ್ಲಿ ಪ್ರೇಮಿಗಳ ದಿನಾಚರಣೆ ಆಚರಿಸುವುದು ಸರಿಯಲ್ಲ. ಬಜರಂಗದಳ ಜಿಲ್ಲಾ ಸಂಚಾಲಕರಾದ ನವೀನ್ ಮೂಡು ಶೆಡ್ಡೆ ಅವರು ಪ್ರೇಮಿಗಳ ದಿನಾಚರಣೆಯನ್ನು ಪ್ರೇರೇಪಿಸುವ ನಗರದ ಎಲ್ಲಾ ಹೂ ಅಂಗಡಿ ಮತ್ತು ಗಿಫ್ಟ್ ಸೆಂಟರ್ ಗಳು ಪ್ರೇಮಿಗಳ ದಿನಾಚರಣೆ ಸಂಬಂಧಿಸಿದ ಯಾವುದೇ ವಸ್ತುಗಳನ್ನು ಮಾರಾಟ ಮಾಡಬಾರದು ಮತ್ತು ಈ ಆಚರಣೆಗೆ ಬೆಂಬಲ ಸೂಚಿಸಬಾರದು ಎಂದು ವಿನಂತಿಸಿದ್ದಾರೆ.

ಪ್ರೇಮಿಗಳ ದಿನಾಚರಣೆ ಗೆ ಹಿಂದೂ ಜನಜಾಗೃತಿ ಸಮಿತಿಯು ಕೂಡ ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದು ಪೊಲೀಸರು ಕಾನೂನಿನಡಿ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಕಾನೂನು ವ್ಯಾಪ್ತಿ ಮೀರಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ.