Home News ಶಾಲಾ ಆವರಣದಲ್ಲಿ ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ !! | ಸಾರ್ವಜನಿಕ ವಲಯದಲ್ಲಿ...

ಶಾಲಾ ಆವರಣದಲ್ಲಿ ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ !! | ಸಾರ್ವಜನಿಕ ವಲಯದಲ್ಲಿ ಶಿಬಿರದ ಕುರಿತು ಪರ-ವಿರೋಧ ಚರ್ಚೆ

Hindu neighbor gifts plot of land

Hindu neighbour gifts land to Muslim journalist

ರಾಜ್ಯದಲ್ಲಿ ಇನ್ನೂ ಕೂಡ ಧರ್ಮ ದಂಗಲ್ ನಿಂತಿಲ್ಲ. ಹಿಜಾಬ್, ಆಜಾನ್ ಹಾಗೂ ದೇವಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ದಿನವೂ ಹಿಂದೂ ಮುಸ್ಲಿಮರ ನಡುವೆ ಧರ್ಮಯುದ್ಧ ನಡೆಯುತ್ತಿದೆ. ಆದರೂ ಯಾವುದೇ ರೀತಿಯ ಕೋಮುಗಲಭೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳುತ್ತಿರುವ ಸರ್ಕಾರ ಇದೀಗ ಮತ್ತೊಂದು ವಿವಾದಕ್ಕೆ ದಾರಿಮಾಡಿಕೊಟ್ಟಂತಿದೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಬಜರಂಗದಳದಿಂದ ನೂರಾರು ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವುದು ಬೆಳಕಿಗೆ ಬಂದಿದೆ. ಇದರಿಂದ ಶಾಲೆಯ ಆವರಣದಲ್ಲಿ ಹಿಜಾಬ್‌ಗೆ ಅವಕಾಶ ಇಲ್ಲವೆಂದಿದ್ದ ಸರ್ಕಾರ ಇದೀಗ ಶಸ್ತ್ರಾಸ್ತ್ರ ತರಬೇತಿಗೆ ಅವಕಾಶ ನೀಡಿದ್ದು ಹೇಗೆ? ಎಂಬ ಚರ್ಚೆಗಳು ಶುರುವಾಗಿದೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕೊಡಗಿನ ಪೊನ್ನಂಪೇಟೆ ಸಾಯಿ ಶಂಕರ ಶಾಲೆಯಲ್ಲಿ ಕಳೆದ ವಾರ ಮುಕ್ತಾಯವಾದ ಶೌರ್ಯ ಪ್ರಶಿಕ್ಷಣ ವರ್ಗದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗಿದೆ. ಶಾಲಾ ಆವರಣದಲ್ಲೇ ಸುಮಾರು 8 ದಿನಗಳ ಕಾಲ ಶೌರ್ಯ ಪ್ರಶಿಕ್ಷಣ ವರ್ಗದ ತರಬೇತಿ ನಡೆದಿದೆ. ಈ ತರಬೇತಿ ಶಿಬಿರ ನಡೆದ 8 ದಿನಗಳ ಅವಧಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಹಾಗೂ ಜಿಲ್ಲೆಯ ಕೆಲ ಮುಖಂಡರೂ ಪಾಲ್ಗೊಂಡಿದ್ದರು ಎಂದು ಮೂಲಗಳು ಖಚಿತ ಪಡಿಸಿವೆ.

ರಾಜ್ಯದ ವಿವಿಧೆಡೆಯಿಂದ ಬಂದಿದ್ದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ತರಬೇತಿ ಪಡೆದುಕೊಂಡಿದ್ದಾರೆ. ಶಾಲಾ ಆವರಣದಲ್ಲಿ ಬಂದೂಕು ಹಿಡಿದು ತರಬೇತಿ ಪಡೆಯುತ್ತಿರುವುದು ಹಾಗೂ ಸಂಸ್ಥೆಯ ಸಭಾಂಗಣದಲ್ಲಿ ತ್ರಿಶೂಲ ಹಿಡಿದು ದೀಕ್ಷೆ ಪಡೆಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಈ ಕುರಿತು ಟ್ವೀಟ್ ಮೂಲಕ ಆಕ್ಷೇಪ ವ್ಯಕ್ತಪಡಿಸಿರುವ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಪ್ರಮುಖರಿಗೆ ಟ್ಯಾಗ್ ಮಾಡಿ, ತನಿಖೆ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.