ಸೋಮವಾರ, 26 ಅಕ್ಟೋಬರ್ 2026
Trending

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿಷೇಧ- ಜಿಲ್ಲಾಧಿಕಾರಿ ಆದೇಶ!!

ಭಜರಂಗದಳ ಮುಖಂಡ ಪುನೀತ್ ಅತ್ತಾವರ ಅವರನ್ನು ಉಡುಪಿ ಜಿಲ್ಲೆಯಿಂದ ಮೂರು ತಿಂಗಳ ಕಾಲ ಪ್ರವೇಶ ನಿರ್ಬಂಧ ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ. 

Sponsored

ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದ್ದು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ದೊರೆತಿರುವ ಅಧಿಕಾರವನ್ನು ಚಲಾಯಿಸಿ ಈ ಆದೇಶ ಹೊರಡಿಸಲಾಗಿದೆ.

Advertisement

ಆದೇಶದ ಪ್ರಕಾರ, ಆಗಸ್ಟ್ 14ರಿಂದ ನವೆಂಬರ್ 13ರವರೆಗೆ ಒಟ್ಟು ಮೂರು ತಿಂಗಳ ಅವಧಿಗೆ ಪುನೀತ್ ಅತ್ತಾವರ ಅವರು ಉಡುಪಿ ಜಿಲ್ಲೆಯ ಯಾವುದೇ ಪ್ರದೇಶಕ್ಕೆ ಪ್ರವೇಶಿಸದಂತೆ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಈ ನಿರ್ಬಂಧದ ಆದೇಶಕ್ಕೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 13ರ ಮಧ್ಯಾಹ್ನ 12 ಗಂಟೆಯೊಳಗೆ ಲಿಖಿತ ರೂಪದಲ್ಲಿ ಸಲ್ಲಿಸಲು ಜಿಲ್ಲಾಧಿಕಾರಿಗಳು ಕಾಲಾವಕಾಶ ನೀಡಿದ್ದರು. ಸಿಬ್ಬಂದಿ ಮೂಲಕ ಅಥವಾ ಜಿಲ್ಲಾಧಿಕಾರಿ ಕಚೇರಿಯ ಇ-ಮೇಲ್‌ಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಲಾಗಿತ್ತು. ನಿಗದಿತ ಅವಧಿಯಲ್ಲಿ ಯಾವುದೇ ಆಕ್ಷೇಪಣೆ ಬರದಿದ್ದರೆ, ನಿಯಮಾನುಸಾರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.