ಸೋಮವಾರ, 26 ಅಕ್ಟೋಬರ್ 2026
Trending

ಬಳ್ಳಾರಿ ಚಲೋಗೆ ಭರ್ಜರಿ ಚಾಲನೆ: ₹187 ಕೋಟಿ ಹಗರಣದ ಹಣ ವಾಪಸ್‌ಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅವ್ಯವಹಾರವನ್ನು ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ತೀವ್ರ ಸ್ವರೂಪ ಪಡೆದುಕೊಂಡಿದೆ.

Sponsored

ಭಾಷೆಯ ಜೊತೆ ಸಂಸ್ಕೃತಿಯನ್ನೂ ಕಳಿಸಿದ ಮೇಷ್ಟ್ರು: ಹಳೆಯ ನೆನಪುಗಳನ್ನು ಸ್ಮರಿಸಿದ ಡಿ.ಕೆ. ಶಿವಕುಮಾರ್

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪಾದಯಾತ್ರೆ ಕೇವಲ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯನ್ನು ಕೇಂದ್ರವಾಗಿಟ್ಟುಕೊಂಡಿಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಪೂರ್ಣ ಹಣವನ್ನು ವಾಪಸ್ ಪಡೆಯಬೇಕು ಎಂಬುದು ಬಿಜೆಪಿಯ ಪ್ರಮುಖ ಆಗ್ರಹವಾಗಿದೆ ಎಂದು ಅವರು ಹೇಳಿದ್ದಾರೆ.
ಇದರ ಜೊತೆಗೆ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಹೆಚ್ಚಿಸಲಾಗಿದ್ದ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ಜಾರಿಗೆ ತಂದಿಲ್ಲ ಎಂಬ ಆರೋಪವನ್ನೂ ಬಿಜೆಪಿ ಮುಂದಿಟ್ಟಿದೆ. ಅಲೆಮಾರಿ ಹಾಗೂ ಹಿಂದುಳಿದ ಸಮುದಾಯಗಳ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಭಾಷೆಯ ಜೊತೆ ಸಂಸ್ಕೃತಿಯನ್ನೂ ಕಳಿಸಿದ ಮೇಷ್ಟ್ರು: ಹಳೆಯ ನೆನಪುಗಳನ್ನು ಸ್ಮರಿಸಿದ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರಿಗೆ ಉದ್ಯೋಗ ಕಲ್ಪಿಸುವ ವಿಚಾರದಲ್ಲೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಅವರು ಟೀಕಿಸಿದ್ದಾರೆ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಬರದ ಪರಿಸ್ಥಿತಿ ಎದುರಾಗಿದ್ದರೂ, ಅಗತ್ಯ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ. ಬರಪೀಡಿತ ತಾಲೂಕುಗಳ ಘೋಷಣೆಯಲ್ಲೂ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ರೈತರು, ದಲಿತರು, ಬಡವರು ಹಾಗೂ ಯುವಕರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ಬಿಜೆಪಿ ನಿರ್ಧರಿಸಿದೆ. ಇದೇ ಹೋರಾಟದ ಭಾಗವಾಗಿ ಬಳ್ಳಾರಿ ಚಲೋ ಪಾದಯಾತ್ರೆ ನಡೆಯುತ್ತಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಭಾಷೆಯ ಜೊತೆ ಸಂಸ್ಕೃತಿಯನ್ನೂ ಕಳಿಸಿದ ಮೇಷ್ಟ್ರು: ಹಳೆಯ ನೆನಪುಗಳನ್ನು ಸ್ಮರಿಸಿದ ಡಿ.ಕೆ. ಶಿವಕುಮಾರ್