# Bangalore: ಸೆ.22 ರಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭ

- Link: https://hosakannada.com/news/bangalore-news-statewide-social-and-educational-survey-begins-from-september-22/
- Published: 2025-09-08T08:10:58+00:00
- Author: ಹೊಸಕನ್ನಡ ನ್ಯೂಸ್

Bangalore : ಸೆ.22 ರಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದ್ದು,
ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎನ್ನುವುದು ರಾಜ್ಯದ ಎಲ್ಲಾ
ಜನರ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿದುಕೊಂಡು ರಾಜ್ಯದ ಭವಿಷ್ಯದ ನೀತಿ ನಿರೂಪಣೆಯ
ಆಧಾರವಾಗುತ್ತದೆ. ಈ ಕಾರ್ಯವು ನಾಗರೀಕರಾದ ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ

Sponsored

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಮನೆಮನೆ
ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯದಾದ್ಯಂತ ಹಮ್ಮಿಕೊಂಡಿದೆ. ಸಮೀಕ್ಷೆಯ
ಪ್ರಶ್ನಾವಳಿಯಲ್ಲಿ ಸುಮಾರು 60 ಪ್ರಶ್ನೆಗಳಿದ್ದು, ಪಡಿತರ ಚೀಟಿ ಅಥವಾ ಆಧಾರ್ ಸಂಖ್ಯೆಯನ್ನು ದೃಢೀಕರಣ
ಪತ್ರವಾಗಿ ಆಧಾರ ಮಾಡಿಕೊಂಡು ಸಮೀಕ್ಷೆ ಕಾರ್ಯವನ್ನು ನಡೆಸಲಾಗುತ್ತದೆ. ಈ ಸಂದರ್ಭದಲ್ಲಿ ಪಡಿತರ ಚೀಟಿ,
ಆಧಾರ್ ಕಾರ್ಡ್/ಸಂಖ್ಯೆ ಮತದಾರರ ಗುರುತಿನ ಚೀಟಿ, ವಿಕಲಚೇತನರಾಗಿದ್ದಲ್ಲಿ UID ಕಾರ್ಡ್ ಅಥವಾ ಪ್ರಮಾಣ
ಪತ್ರ ಗಳನ್ನು ಸಿದ್ಧವಾಗಿಟ್ಟು ಕೊಳ್ಳಬೇಕಾಗಿರುತ್ತದೆ.

Advertisement

Advertisement

ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ಗಳು ಮೊಬೈಲ್ ನಂಬರ್ಗಳಿಗೆ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳುವುದು
ಅತ್ಯಗತ್ಯ. ಸಮೀಕ್ಷೆ ವೇಳೆ ಇ-ಕೆವೈಸಿ (e-KYC) ಪ್ರಕ್ರಿಯೆಗಾಗಿ OTP ಸಂಖ್ಯೆ ಆ ಸದಸ್ಯರ ಆಧಾರ್ 
ನಂಬರ್ಗೆ ಜೋಡಣೆ ಆಗಿರುವ ಮೊಬೈಲ್ ನಂಬರ್ಗೆ ಬರುತ್ತದೆ. ಒಂದು ವೇಳೆ ಆ ಸದಸ್ಯರು ಮನೆಯಲ್ಲಿ ಇಲ್ಲದಿದ್ದರೆ
ಕುಟುಂಬದ ಪರವಾಗಿ ಉತ್ತರ ನೀಡುತ್ತಿರುವ ಸದಸ್ಯರು ಫೋನ್ ಮೂಲಕ OTP ಸಂಖ್ಯೆಯನ್ನು ಪಡೆದು ಮಾಹಿತಿ 
ನೀಡಬೇಕಾಗುತ್ತದೆ.

 

Advertisement
