# ಬಂಟ್ವಾಳದಲ್ಲಿ ಭೀಕರ ಅಪಘಾತ – ಟಿಪ್ಪರ್ ಗುದ್ದಿ ಸ್ಕೂಟರ್ ಸವಾರ ಸಾವು, ಮತ್ತೊಬ್ಬ ಗಂಭೀರ!!

- Link: https://hosakannada.com/news/bantwal-accident-involving-tipper-and-scooter-rider-dies-another-seriously-injured/
- Published: 2026-08-07T07:47:16+00:00
- Author: ಹೊಸಕನ್ನಡ ನ್ಯೂಸ್

ಬಂಟ್ವಾಳ, ಆ.6: ಬಂಟ್ವಾಳದ ಬಿ.ಸಿ.ರೋಡ್‌ ಎನ್‌.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ
ರಸ್ತೆ ಅಪಘಾತದಲ್ಲಿ ಸ್ಕೂಟರ್‌ನಲ್ಲಿದ್ದ ಸಹಸವಾರ ಮೃತಪಟ್ಟಿದ್ದು, ಸವಾರ ಗಂಭೀರ ಗಾಯಗೊಂಡಿದ್ದಾರೆ.

Sponsored

ಗುರುವಾರ ಸಂಜೆ 6.30ರ ಸುಮಾರಿಗೆ ಕಲ್ಲಡ್ಕ ಕಡೆಯಿಂದ ಲೊರೆ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿಯು,
ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ, ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ
ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Advertisement

ಅಪಘಾತದಲ್ಲಿ ಸ್ಕೂಟರ್ ಸವಾರ ದಯಾನಂದ ಹಾಗೂ ಸಹಸವಾರ ಯಶ್ವಂತ್ ಕುಲಾಲ್ ಗಂಭೀರವಾಗಿ ಗಾಯಗೊಂಡಿದ್ದು,
ಇಬ್ಬರನ್ನೂ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರ್ಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಯಶ್ವಂತ್‌ ಕುಲಾಲ್ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ದಯಾನಂದ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.
ಅಪಘಾತಕ್ಕೆ ಕಾರಣ ಎನ್ನಲಾದ ಟಿಪ್ಪರ್ ಚಾಲಕ ಸಲ್ಮಾನ್ ಫಾರುಕ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು,
ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

Advertisement
