ಶನಿವಾರ, 24 ಅಕ್ಟೋಬರ್ 2026

ಬಂಟ್ವಾಳ : ತಲ್ವಾರ್, ಕಬ್ಬಿಣದ ರಾಡ್ ನಿಂದ ಹಲ್ಲೆ- ಮೂವರು ಆರೋಪಿಗಳು ಅರೆಸ್ಟ್

ಬಂಟ್ವಾಳ: ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ನಿವಾಸಿ ಪ್ರಶಾಂತ್ ಬೆಳ್ಳಾಡ್ (41) ಎಂಬವರು ಸೆ.20ರಂದು ಸಂಜೆ ಕಮ್ಮಾಜೆಯಲ್ಲಿ ಇದ್ದಾಗ, ಆಟೋರಿಕ್ಷಾದಲ್ಲಿ ಬಂದ ಪರಿಚಯದವರಾದ ಅಮ್ಮುಂಜೆ ನಿವಾಸಿ ಪ್ರಶಾಂತ್ (38), ತೆಂಕಬೆಳ್ಳೂರು ನಿವಾಸಿ ರಾಮದಾಸ್ (43) ಹಾಗೂ ಬಡಗಬೆಳ್ಳೂರು ನಿವಾಸಿ ಶಂಕರ (45) ಎಂಬವರು ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಯಿಂದ ಪ್ರಶಾಂತ್ ಬೆಳ್ಳಾಡ್ ಅವರಿಗೆ ತೀವ್ರ ರಕ್ತಗಾಯವಾಗಿದ್ದು, ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭಪರಿಚಯದವರು ಸ್ಥಳಕ್ಕೆ ಬರುತ್ತಿರುವುದನ್ನು ಕಂಡ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು 3 ಆರೋಪಿಗಳನ್ನು ಬಂಧಿಸಿದ್ದಾರೆ.