ಸೋಮವಾರ, 26 ಅಕ್ಟೋಬರ್ 2026
Trending

ಬಂಟ್ವಾಳ: ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ, 12 ಅಂಕದ ಕೋಳಿ, ಕತ್ತಿ, ನಗದು ವಶ

Puttur
Advertisement

ಬಂಟ್ವಾಳ; ಅಮ್ಟಾಡಿ ಗ್ರಾಮದ ಎರ್ಮುಡೆ ಎಂಬಲ್ಲಿ ಹಣವನ್ನು ಪಣಕ್ಕಿಟ್ಟು ಕೊಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ನಗರ ಪೊಲIಸರು ದಾಳಿ ಮಾಡಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

Sponsored

ಅ.18 ರಂದು ಸಂಜೆ ಎರ್ಮುಡೆ ಎಂಬಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ಮಾಡಿದ್ದು, ಜೂಜಾಟದಲ್ಲಿ ಹಲವು ಪರಾರಿಯಾಗಿದ್ದಾರೆ. ಈ ಪೈಕಿ ಬಂಟ್ವಾಳದ ಬಿ ಮೂಡ ಗ್ರಾಮದ ಗಣೇಶ್‌ (33) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement
Advertisement

ಸ್ಥಳದಲ್ಲಿದ್ದ 12 ಅಂಕದ ಕೋಳಿಗಳು, ಕೋಳಿ ಅಂಕಕ್ಕೆ ಬಳಸುತ್ತಿದ್ದ ಕತ್ತಿ, ರೂ.1,100 ನಗದನ್ನು ಪೊಲೀಸರು ವಶಪಡಿಸಿದ್ದಾರೆ. ಈ ಘಟನೆ ಸಂಬಂಧ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರಿದಿದೆ.

Advertisement
div class="ere-sticky">