Home News ಬಂಟ್ವಾಳ | ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ‌ ಎಸಗಿದ ಕಾಮುಕರು,...

ಬಂಟ್ವಾಳ | ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ‌ ಎಸಗಿದ ಕಾಮುಕರು, ದೂರು ದಾಖಲು

Hindu neighbor gifts plot of land

Hindu neighbour gifts land to Muslim journalist

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿ ಅಮ್ಟಾಡಿ ಎಂಬಲ್ಲಿ ನಡೆದಿದೆ.

ಆರೋಪಿಗಳು ಬಾಲಕಿಯನ್ನು ಯಾವುದೋ ನಿಗೂಢ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಬಾಲಕಿಯ ಹೇಳಿಕೆಯ ಆಧಾರದಲ್ಲಿ ಪೊಲೀಸರಿಗೆ ಆರೋಪಿಗಳ ಸುಳಿವು ಲಭ್ಯವಾಗಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಬಾಲಕಿಯನ್ನು ಯಾವುದೋ ನಿಗೂಢ ತಾಣಕ್ಕೆ ಕರೆದುಕೊಂಡು ಹೋಗಿದ್ದ ಆರೋಪಿಗಳು ಬಳಿಕ ಆಕೆಯನ್ನು ಬ್ರಹ್ಮರಕೂಟ್ಲು ಬಳಿ ಬಿಟ್ಟು ಹೋಗಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ ಎನ್ನಲಾಗಿದೆ.

ಪ್ರಕರಣದ ಕುರಿತು ಹಲವು ಸಂಶಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಬಂಟ್ವಾಳ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಗ್ಯಾಂಗ್ ರೇಪ್ ಪ್ರಕರಣ ದಾಖಲಾಗುವ ಸಾಧ್ಯತೆಯ ಇದೆ ಎಂದು ತಿಳಿದುಬಂದಿದೆ.