Home News ಬಂಟ್ವಾಳ | ನಾಪತ್ತೆಯಾಗಿದ್ದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬಂಟ್ವಾಳ | ನಾಪತ್ತೆಯಾಗಿದ್ದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Hindu neighbor gifts plot of land

Hindu neighbour gifts land to Muslim journalist

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ನಯನಾಡು ಪರಿಸರದಲ್ಲಿ ಬೆಳಕಿಗೆ ಬಂದಿದೆ.

ಕೊಡಂಬೆಟ್ಟು ಗ್ರಾಮದ ಹತ್ತುರ್ಲೆ ನಿವಾಸಿ ರಾಜೇಶ್ ಪೂಜಾರಿ(45) ಮೃತ ವ್ಯಕ್ತಿ. ಇವರ ಮೃತದೇಹ ನಯನಾಡು ಪರಿಸರದ ಗುಡ್ಡೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ರಾಜೇಶ್ ಅವರು ನಯನಾಡುವಿನ ಹೋಟೆಲ್ ಒಂದರಲ್ಲಿ ಉದ್ಯೋಗದಲ್ಲಿದ್ದರು. ಕಳೆದ ಸೆ.2ರಂದು ಮನೆಗೆ ಬಂದು ವಾಪಾಸು ಹೋದವರು ನಾಪತ್ತೆ ಆಗಿದ್ದಾರೆ ಎಂದು ಕುಟುಂಬಸ್ಥರು ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದರು.

ನಾಪತ್ತೆ ಬಳಿಕ ಮನೆ ಮಂದಿ ಸಹಿತ ಊರವರು ರಾಜೇಶ್ ಅವರಿಗಾಗಿ ಎಲ್ಲೆಡೆ ಹುಡುಕಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾಗಿತ್ತು. ರವಿವಾರ ಬೆಳಗ್ಗೆ ರಾಜೇಶ್ ಅವರ ಮೃತದೇಹ ನಯನಾಡಿನ ಖಾಸಗಿ ಜಮೀನಿನ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರು, ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ ಎಂದು ತಿಳಿದುಬಂದಿದೆ.