Home News Dasara: ಬಾನು ಮುಷ್ತಾಕ್ ದಸರಾ ಉದ್ಘಾಟನೆ- ಮುಸ್ಲಿಂ ಲೇಖಕಿ ಕೈಯಲ್ಲಿ ದಸರಾ ಉದ್ಘಾಟನೆಗೆ ಬಾರಿ ವಿರೋಧ,...

Dasara: ಬಾನು ಮುಷ್ತಾಕ್ ದಸರಾ ಉದ್ಘಾಟನೆ- ಮುಸ್ಲಿಂ ಲೇಖಕಿ ಕೈಯಲ್ಲಿ ದಸರಾ ಉದ್ಘಾಟನೆಗೆ ಬಾರಿ ವಿರೋಧ, ರಾಜ್ಯಪಾಲರಿಗೆ ದೂರು ಸಲ್ಲಿಸಲು ಸಿದ್ಧತೆ

Hindu neighbor gifts plot of land

Hindu neighbour gifts land to Muslim journalist

Dasara: ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬುಕರ್ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಜಿಲ್ಲಾಡಳಿತದ ವತಿಯಿಂದ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆದರೆ ಕೆಲವು ಹಿಂದೂ ನಾಯಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಲೇಖಕಿ ಭಾನು ಮುಸ್ತಾಪ್ ಅವರಿಂದ ಉದ್ಘಾಟಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆದರೆ, ಈ ನಿರ್ಧಾರಕ್ಕೆ ರಾಜ್ಯದ ಕೆಲವು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮುಸ್ಲಿಂ ಸಮುದಾಯದ ಮಹಿಳೆಯ ಕೈಯಲ್ಲಿ ದಸರಾ ಉದ್ಘಾಟನೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿವೆ.

ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ನಾಯ್ಕ್ ನೇತೃತ್ವದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲರಿಗೆ ದೂರು ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವಕುಮಾರ್ ನಾಯ್ಕ್, ‘ಭಾನು ಮುಸ್ತಾಪ್ ಅವರನ್ನ ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ನಿರ್ಧಾರವನ್ನು ಮುಖ್ಯಮಂತ್ರಿಗಳು ಕೂಡಲೇ ಕೈಬಿಡಬೇಕು’ ಎಂದು ಆಗ್ರಹಿಸಿದರು.

Weather Report: ಕರ್ನಾಟಕದ ಹವಾಮಾನ ವರದಿ: ಮಳೆ ಇನ್ನು ಮುಂದುವರೆಯುತ್ತಾ? ಇಲ್ಲಾ ಕೊಂಚ ವಿರಾಮ ನೀಡುತ್ತಾ?