

Belagavi Session: ಬೆಳಗಾವಿ ಅಧಿವೇಶನದ (Belagavi Session)ಮೊದಲ ದಿನವೇ ಎಂಎಲ್‌ಸಿ ಎನ್. ರವಿಕುಮಾರ್ (MLC N. Ravikumar) ಮದ್ಯಪ್ರಿಯರ ರಕ್ಷಣೆ ಬಗ್ಗೆ ಪ್ರಶ್ನೆ ಎತ್ತಿದ್ದು, ಮಧ್ಯಪ್ರಿಯರಿಗೆ ಆರೋಗ್ಯದ ರಕ್ಷಣೆ ನೀಡಬೇಕೆಂದು ಮನವಿ ಮಾಡಿದರು.
ಹೌದು, ಬಿಜೆಪಿ ಎಂಎಲ್‌ಸಿ ರವಿಕುಮಾರ್, ಸರ್ಕಾರಕ್ಕೆ ಖತರ್ನಾಕ್ ಐಡಿಯಾ ನೀಡಿದ್ದು, ಸರ್ಕಾರ ಕುಡುಕರ ಲಿವರ್‌ಗೆ ಗ್ಯಾರಂಟಿ ಕೊಟ್ಟರೆ, ಖಂಡಿತವಾಗಿ ರಾಜ್ಯದಲ್ಲಿ ಅಬಕಾರಿ ಆದಾಯ ಹೆಚ್ಚಾಗಲಿದೆ ಎಂದು ಹೇಳಿದ್ದಾರೆ. ಈ ಕುರಿತಾಗಿ ಮಾತನಾಡಿದ ಅವರು ಮದ್ಯಸೇವಿಸುವ ಶೇ. 3ರಷ್ಟು ಜನ ರೋಗಕ್ಕೆ ತುತ್ತಾಗುತ್ತಿದ್ದಾರೆ. ಲಿವರ್ ಡ್ಯಾಮೇಜ್, ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜಾಂಡಿಸ್ ಕಾಯಿಲೆಯಿಂದ ಮದ್ಯಪ್ರಿಯರು ಬೇಗನೆ ಸಾಯುತ್ತಿದ್ದಾರೆ. ಹೀಗಾಗಿ ಸರ್ಕಾರಕ್ಕೆ ಬರುವ ಆದಾಯದಲ್ಲಿ ಮದ್ಯಪ್ರಿಯರ ಆರೋಗ್ಯ ರಕ್ಷಣೆಗೆ ಶೇಕಡಾ 20% ಹಣವನ್ನು ಸರಕಾರ ಮೀಸಲಿಡಿಬೇಕು ಅಂತಾ ಒತ್ತಾಯಿಸಿದರು.
ಮದ್ಯಪ್ರಿಯರ ಆರೋಗ್ಯ ಚಿಕಿತ್ಸೆಗೆ ಅಬಕಾರಿ ಆದಾಯದ 20% ಮೀಸಲಿಡುವಂತೆ ಎಂಎಲ್‌ಸಿ ರವಿಕುಮಾರ್ ಪ್ರಸ್ತಾಪಕ್ಕೆ ಲಿಖಿತ ಉತ್ತರ ನೀಡಿದ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ, ಏಪ್ರಿಲ್ 2025 ರಿಂದ ಸೆಪ್ಟೆಂಬರ್ ವರೆಗೆ 195 ಲಕ್ಷ ಪೆಟ್ಟಿಗೆ ಬಿಯರ್ ಮಾರಾಟ ಆಗಿದೆ. ಕಳೆದ ಇದೇ ಅವಧಿಗೆ ಹೋಲಿಸಿದಲ್ಲಿ 47, 46 ಸಾವಿರ ಪೆಟ್ಟಿಗೆಗಳು ಕಡಿಮೆ ಮಾರಾಟ. ಶೇ.19.55 ಮಾರಾಟ ಬೆಳವಣಿಗೆ ಕುಂಠಿತವಾಗಿದೆ. ಪ್ರಸ್ತುತ ಸಾಲಿನಲ್ಲಿ ಬಿಯರ್ ಮಾರಾಟವು ಕಡಿಮೆ ಮಾರಾಟವಾಗುತ್ತಿದೆ. ರಾಜ್ಯದಲ್ಲಿ ಹೆಚ್ಚಿನ ಮಳೆಯಿಂದ ಶೀತ ವಾತಾವರಣವಿದೆ. ಶೀತ ವಾತಾವರಣದ ಕಾರಣ ಬಿಯರ್ ಮಾರಾಟದಲ್ಲಿ ಕುಸಿತ ಆಗಿದೆ ಎಂದಿದ್ದಾರೆ.













