ಬೆಳ್ತಂಗಡಿ: ತಾಲೂಕಿನ ಪುದುವೆಟ್ಟು ಗ್ರಾಮದಲ್ಲಿ 20 ವರ್ಷದ ಯುವತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಹಾಗೂ ಮಾಲತಿ ದಂಪತಿಯ ಪುತ್ರಿ ಲಿಶ್ಮಿತ ಗೌಡ (20) ಮೃತ ಯುವತಿ. ಲಿಶ್ಮಿತ ಅವರು ನಡ ಕಾಲೇಜಿನಲ್ಲಿ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಘಟನೆ ಬಗ್ಗೆ ಗೊತ್ತಾಗುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬಾವಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸುದ್ದಿ ತಿಳಿದ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.



