Home News ಬೆಳ್ತಂಗಡಿ |  ಲಾಯಿಲ ನಿವಾಸಿ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ, ಶರೀಫ್ ಎಂಬವರ ಕಿರುಕುಳವೇ ಆತ್ಮಹತ್ಯೆಗೆ...

ಬೆಳ್ತಂಗಡಿ |  ಲಾಯಿಲ ನಿವಾಸಿ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ, ಶರೀಫ್ ಎಂಬವರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಪತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ ತಾಲೂಕಿನ ಲಾಯಿಲ ಇಲ್ಲಿಯ ಕುಂಟಿನಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕುವೆಟ್ಟು ಗ್ರಾಮದ ಆದಂ ರವರ ಪತ್ನಿ ಅಸ್ಮ ಎಂಬವರೇ ಮೃತ ದುರ್ದೈವಿ.

ಆದಂ ರವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅಸ್ಮರವರು ಲಾಯಿಲ ಗ್ರಾಮದ ಕುಂಟಿನಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದರು. ಸೆ.8 ರಂದು ಈಕೆ ಮನೆಯಲ್ಲಿ ವಿಷ ಪದಾರ್ಥ ಸೇವಿಸಿದ್ದರು. ಕೂಡಲೇ ಇವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಸೆ.9 ರಂದು ಮಧ್ಯಾಹ್ನ ಮೃತಪಟ್ಟಿದ್ದರು.

ವಿಚಾರ ತಿಳಿದ ಪತಿ ಇದೀಗ ಊರಿಗೆ ಮರಳಿದ್ದು, ಆದಂರವರು ಲಾಯಿಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶರೀಫ್ ಎಂಬವರ ಕಿರುಕುಳದಿಂದ ತನ್ನ ಪತ್ನಿ ಅಸ್ಮಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಶರೀಫ್

ಈ ದೂರಿನನ್ವಯ ಅ.ಕ್ರ 81/2021 ಕಲಂ: 306 ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ತಂಗಡಿ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.