# ಬೆಳ್ತಂಗಡಿ | ಲಾಯಿಲ ಪ್ರಸನ್ನ ಕಾಲೇಜ್ ಸೀಲ್ ಡೌನ್, 11 ವಿದ್ಯಾರ್ಥಿಗಳಲ್ಲಿ ಕಂಡುಬಂದ ಮಹಾಮಾರಿ

- Link: https://hosakannada.com/news/beltangady-prasanna-college-seal-down/
- Published: 2021-08-21T12:23:17+00:00
- Author: ನಿಶ್ಮಿತಾ ಎನ್.

ದ.ಕ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಬೆಳ್ತಂಗಡಿ ತಾಲೂಕಿನ
ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಸನ್ನ ಕಾಲೇಜನ್ನು ಸೀಲ್ ಡೌನ್ ಮಾಡಲಾಗಿದೆ.

Sponsored

ಪ್ರಸನ್ನ ಕಾಲೇಜ್ ನ ಹಾಸ್ಟೆಲ್ ನಲ್ಲಿರುವ 11 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ
ಆ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

Advertisement

Advertisement

ಸೋಂಕು ಪತ್ತೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಈಗಾಗಲೇ ಕೋವಿಡ್ ಕೇರ್ ಸೆಂಟರ್ ಗೆ ಸ್ಥಳಾಂತರಿಸಲಾಗಿದೆ.
ಇನ್ನುಳಿದ ವಿದ್ಯಾರ್ಥಿಗಳ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ.

Advertisement
