ಭಾನುವಾರ, 25 ಅಕ್ಟೋಬರ್ 2026
Trending

ಬೆಳ್ತಂಗಡಿ | ಉಜಿರೆ ಕಾಲೇಜು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಉಜಿರೆ ಕಾಲೇಜು ರಸ್ತೆಯಲ್ಲಿ ಸುಜುಕಿ ಕಂಪನಿಯ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ.

Sponsored

ಉಜಿರೆ ನಿವಾಸಿ ವೃತ್ತಿಯಲ್ಲಿ ಶಿಕ್ಷಕ ರವೀಶ್ ಅವರಿಗೆ ಸೇರಿದ ಕಾರೆಂದು ಎಂದು ತಿಳಿದುಬಂದಿದೆ. ಅವರೇ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಧರ್ಮಸ್ಥಳದಿಂದ ಉಜಿರೆ ಕಡೆಗೆ ತೆರಳುತ್ತಿರುವಾಗ ಈ ಘಟನೆ ಸಂಭವಿಸಿದೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಮಾತ್ರ ಸಂಪೂರ್ಣ ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಹೊಯ್ಸಳ ಪೊಲೀಸರು ಹಾಗೂ ಬೆಳ್ತಂಗಡಿ ಪೊಲೀಸರು ಆಗಮಿಸಿದ್ದಾರೆ. ಹಾಗೆಯೇ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.