ಬೆಳ್ತಂಗಡಿ: ತಾಲೂಕು ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಹರೀಶ್ ಪೂಂಜಾ ಸಭೆ
ಬೆಳ್ತಂಗಡಿ: ಅತ್ಯಂತ ರಮಣೀಯ ಹಾಗೂ ವಿಶಾಲವಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕುವೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸುಮಾರು 15 ಎಕರೆ ವಿಸ್ತೀರ್ಣದ ಗುರುವಾಯನಕೆರೆ ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ಉದ್ದೇಶದಿಂದ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಸಭೆ ನಡೆಸಿದರು.
Sponsored



