ಶನಿವಾರ, 24 ಅಕ್ಟೋಬರ್ 2026

ಬೆಳ್ತಂಗಡಿ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ!!

ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ಆ 8 ರಂದು ಪತ್ತೆಯಾಗಿದೆ.ಮೃತ ವ್ಯಕ್ತಿ ಕೊಯ್ಯರು ಗ್ರಾಮದ ಕೊಂಕದಡ್ಕ ನಿವಾಸಿ ಚಿದಾನಂದ ಯಾನೆ ಉಮೇಶ್ ಗೌಡ (52) ಎಂಬವರಾಗಿದ್ದಾರೆ.

ಈತ ಚಿಕ್ಕಮಗಳೂರು ಜಿಲ್ಲೆಯ ಆಲ್ಲೂರಿನಲ್ಲಿ ಕೆಲಸಕ್ಕೆಂದು ಹೋಗಿದ್ದವರು ಆ 5 ರಂದು ಅಲ್ಲಿಂದ ಮನೆಗೆಂದು ಹೊರಟು ಬಂದಿದ್ದು ಮನೆಗೆ ಬಂದಿರಲಿಲ್ಲ ಇವರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ.

ನಾಪತ್ತೆಯಾಗಿದ್ದ ಚಿದಾನಂದ ಯಾನೆ ಉಮೇಶ ಅವರ ಮೃತದೇಹ ಆ 8ರಂದು ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ನದಿ ಬದಿಯಲ್ಲಿ ಪೊದೆಯಲ್ಲಿ ಸಿಲುಕಿಕೊಂಡ ರೀತಿಯಲ್ಲಿ ಪತ್ತೆಯಾಗಿದ್ದು ಆತನ ಪತ್ನಿಭವಾನಿ ಮೃತದೇಹವನ್ನು ಗುರುತಿಸಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದ ಈತ ನೀರಿಗೆ ಕಾಲುಜಾರಿ ಬಿದ್ದು ಅಥವಾ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.