

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ. ಪಿ ಬೆಳಾಲು ಅವರನ್ನು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಗ್ರಾಮೀಣ ಅಧ್ಯಕ್ಷ ಕೆ. ಎಂ. ನಾಗೇಶ್ ಕುಮಾರ್ ಗೌಡ ಅವರು ನೇಮಕ ಮಾಡಿ ಆದೇಶ ನೀಡಿದ್ದಾರೆ.
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ತಮಗೆ ನೀಡಲಾಗಿರುವ ಜವಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕಾಗಿ ಮಾಡಿ ಎಂದು ತಿಳಿಸಿದ್ದಾರೆ.













