Home latest ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆ ಹಾಗೂ ಪಟ್ಟಣ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ...

ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆ ಹಾಗೂ ಪಟ್ಟಣ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ!

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ : ಇಲ್ಲಿಯ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ದೂರು ಬಂದಿರುವ ಹಿನ್ನಲೆ ಇಂದು ಬೆಳಗ್ಗೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿರುವ ಘಟನೆ ವರದಿಯಾಗಿದೆ.

ಆಸ್ಪತ್ರೆಯ ಅವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ ಅಧಿಕಾರಿಗಳು ಟಿ.ಹೆಚ್.ಓ ಕಲಾ ಮಧು ಮತ್ತು ಕರ್ತವ್ಯ ನಿರತ ವೈದ್ಯರನ್ನು ಕರೆಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ವೈದ್ಯರು ಕರ್ತವ್ಯ
ಹಾಜರಾಗುತ್ತಿಲ್ಲ ಎಂಬ ಹಲವು ದೂರುಗಳು ಲೋಕಾಯಕ್ತ
ಕಛೇರಿಗೆ ಬಂದಿರುವ ಹಿನ್ನಲೆಯಲ್ಲಿ ಇಂದು ಬೆಳಗ್ಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಆಸ್ಪತ್ರೆಯ ಟಿ.ಹೆಚ್.ಓ ಗೆ ಸೂಚನೆ ನೀಡಿ ತೆರಳಿದ್ದಾರೆ.

ಅಲ್ಲದೆ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಗೂ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೊರಗುತ್ತಿಗೆಗಳ ಪರಿಶೀಲನೆ, ಜನನ ಪ್ರಮಾಣ ಪತ್ರಗಳ ಕಡತ ಪರಿಶೀಲನೆ ನಡೆಸಿದ್ದಾರೆ. ಯಾವುದೇ ತೊಂದರೆಗಳು ಇದ್ದರು ಲೋಕಾಯುಕ್ತ ಕಛೇರಿಗೆ ತಿಳಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಾಯಕ್ತ ಎಸ್ಪಿ ಕುಮಾರಸ್ವಾಮಿ, ಡಿವೈಎಸ್ಪಿ ಕಲಾವತಿ, ಚೇಲುವರಾಜ್, ಇನ್ಸ್ಪೆಕ್ಟರ್ ಅಮಾನುಲ್ಲಾ ಭೇಟಿ ನೀಡಿದ್ದಾರೆ.