ಭಾನುವಾರ, 25 ಅಕ್ಟೋಬರ್ 2026
Trending

ಬೆಳ್ತಂಗಡಿ; ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

ಮೃತರನ್ನು ನಿಡ್ಲೆ ಗ್ರಾಮದ ಬೂಡುಜಾಲು ನಿವಾಸಿ ನಾರಾಯಣಗೌಡ ಎಂದು ಗುರುತಿಸಲಾಗಿದೆ. ಇವರು ಕಾರ್ಮಿಕರಾಗಿದ್ದು, ತೆಂಗಿನಕಾಯಿ ಕೀಳುವ ಕೆಲಸಕ್ಕಾಗಿ ಕುತ್ರಿಜಾಲಿಗೆ ತೆರಳಿದ್ದರು.

Sponsored

ತೆಂಗಿನ ಮರ ಏರಿ ಕಾಯಿ ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ವೇಳೆ ಸಮೀಪದಲ್ಲಿ ಕಡಿದು ಹಾಕಲಾಗಿದ್ದ ಅಡಕೆ ಮರದ ತುಂಡಿನ ಭಾಗ ನಾರಾಯಣ ಗೌಡ ಅವರ ಮುಖದ ಮೂಲಕ ತಲೆಗೆ ತಾಗಿದ್ದು, ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ