Advertisement
Advertisement
ಕಳೆದ ಹಲವು ದಿನಗಳಿಂದ ರಸ್ತೆಯಲ್ಲಿ ಅಪಾಯಕಾರಿ ಗುಂಡಿಗಳು ಬಿದ್ದಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
Sponsoredಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಈ ರಸ್ತೆಯಲ್ಲೇ ಪ್ರತಿನಿತ್ಯ ನೂರಾರು ಶಾಲಾ ಮಕ್ಕಳು ಮತ್ತು ಸಾರ್ವಜನಿಕರು ಸಂಚರಿಸುತ್ತಿದ್ದು, ಗುಂಡಿ ತಪ್ಪಿಸಲು ಹೋಗಿ ಅನಾಹುತಗಳು ಸಂಭವಿಸುವ ಭೀತಿ ಎದುರಾಗಿದೆ. ಮಳೆಗಾಲದಲ್ಲಿ ಈ ಗುಂಡಿಗಳು ನೀರಿನಿಂದ ತುಂಬಿಕೊಳ್ಳುವುದರಿಂದ ಮಕ್ಕಳು ಬಿದ್ದ ಉದಾಹರಣೆಗಳೂ ಇವೆ ಎನ್ನಲಾಗಿದೆ. ಅಧಿಕಾರಿಗಳು ಇತ್ತ ಗಮನ ಹರಿಸಿ ಕೂಡಲೇ ರಸ್ತೆ ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.