# ಬೆಳ್ತಂಗಡಿ: ರೆಂಕೆದ ಗುತ್ತು ಆಶ್ರಯ ಕಾಲೊನಿ ಮುಖ್ಯ ರಸ್ತೆಯಲ್ಲಿ ಅಪಾಯಕಾರಿ ಗುಂಡಿಗಳು  ಸಾರ್ವಜನಿಕರ ಆಕ್ರೋಶ

- Link: https://hosakannada.com/news/belthangady-renkada-guttu-ashraya-collony/
- Published: 2026-04-14T18:38:03+00:00
- Author: ಹೊಸಕನ್ನಡ ನ್ಯೂಸ್

ಕಳೆದ ಹಲವು ದಿನಗಳಿಂದ ರಸ್ತೆಯಲ್ಲಿ ಅಪಾಯಕಾರಿ ಗುಂಡಿಗಳು ಬಿದ್ದಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು
ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

Sponsored

ಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ರಸ್ತೆಯಲ್ಲೇ ಪ್ರತಿನಿತ್ಯ ನೂರಾರು ಶಾಲಾ ಮಕ್ಕಳು ಮತ್ತು ಸಾರ್ವಜನಿಕರು ಸಂಚರಿಸುತ್ತಿದ್ದು, ಗುಂಡಿ
ತಪ್ಪಿಸಲು ಹೋಗಿ ಅನಾಹುತಗಳು ಸಂಭವಿಸುವ ಭೀತಿ ಎದುರಾಗಿದೆ. ಮಳೆಗಾಲದಲ್ಲಿ ಈ ಗುಂಡಿಗಳು ನೀರಿನಿಂದ
ತುಂಬಿಕೊಳ್ಳುವುದರಿಂದ ಮಕ್ಕಳು ಬಿದ್ದ ಉದಾಹರಣೆಗಳೂ ಇವೆ ಎನ್ನಲಾಗಿದೆ. ಅಧಿಕಾರಿಗಳು ಇತ್ತ ಗಮನ ಹರಿಸಿ
ಕೂಡಲೇ ರಸ್ತೆ ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.

Advertisement

Advertisement

Advertisement
