ಸೋಮವಾರ, 26 ಅಕ್ಟೋಬರ್ 2026
Trending

ಬೆಳ್ತಂಗಡಿಗೆ ಎರಡು ನ್ಯಾಯಾಧೀಶರನ್ನು ನೇಮಕಗೊಳಿಸಿ ಹೈಕೋರ್ಟ್ ಆದೇಶ

ಕಳೆದ ಆರು ತಿಂಗಳಿನಿಂದ ಖಾಲಿಯಾಗಿದ್ದ ಬೆಳ್ತಂಗಡಿ ನ್ಯಾಯಾಲಯದ ಎರಡು ನ್ಯಾಯಾಧೀಶ ಹುದ್ದೆಗಳನ್ನು ಭರ್ತಿಗೊಳಿಸಿ ಹೈಕೋರ್ಟ್ ಆದೇಶ ನೀಡಿದ್ದು ಪ್ರಧಾನ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾಗಿ ಮಂಗಳೂರಿನಲ್ಲಿ ಪ್ರಧಾನ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ರಾಮಲಿಂಗಪ್ಪ ರವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

Sponsored

ಅದೇ ರೀತಿ ಹೆಚ್ಚುವರಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾಗಿ ಹೊಸದಾಗಿ ನ್ಯಾಯಾಧೀಶರಾಗಿ ನೇಮಕಗೊಂಡು ತರಬೇತಿ ಪೂರೈಸಿದ ಶಶಾಂಕ್ ನಾಗೇಂದ್ರ ಭಟ್ ರವರನ್ನು ನೇಮಕಗೊಳಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಎಂ. ಚಂದ್ರಶೇಖರ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Advertisement

ಬೆಳ್ತಂಗಡಿ ನ್ಯಾಯಾಲಯಕ್ಕೆ ನ್ಯಾಯಾಧೀಶರನ್ನು ನೇಮಕಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ ಮತ್ತು ಪದಾಧಿಕಾರಿಗಳು ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಎಚ್ ಟಿ ನರೇಂದ್ರ ಪ್ರಸಾದ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.