ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ನೆಲ್ಯಡ್ಕ-ಇಸ್ಮಾಳ್ ನಿವಾಸಿ ಬಾಲಕೃಷ್ಣ ಗೌಡ ಅವರು ಶನಿವಾರ ಸಂಜೆ ಆನೆ ದಾಳಿಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮಾಹಿತಿಯ ಪ್ರಕಾರ, ಬಾಲಕೃಷ್ಣ ಗೌಡ ಅವರು ಮುಚ್ಚಿರಡ್ಕ ಭಾಗದಲ್ಲಿ ಕೆಲಸ ಮುಗಿಸಿ ಸಂಜೆ ಮನೆಗೆ ಮರಳದೇ ಇದ್ದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಅವರ ಮಳೆರಕ್ಷಣೆಯ ಪ್ಲಾಸ್ಟಿಕ್ ದಾರಿಯಲ್ಲಿ ಸಿಕ್ಕಿದೆ. ಹೀಗಾಗಿ ದಾರಿಯ ಮಧ್ಯೆ ಕಾಡಾನೆ ದಾಳಿ ನಡೆಸಿರಬಹುದು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.



