ಬೆಂಗಳೂರು: ಯುವತಿಗೆ ಪ್ರಜ್ಞೆ ತಪ್ಪಿಸುವ ಮಾತ್ರೆ ನೀಡಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಡಿಗೆಹಳ್ಳಿಯ ವಿಖ್ಯಾತ್ ಡಯಾಗ್ನೋಸ್ಟಿಕ್ ಕೇಂದ್ರದ ವೈದ್ಯ ಯುವರಾಜ್ ಮನೋಹರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.



ವೈದ್ಯನೊಂದಿಗೆ ಕೆಲಸ ಮಾಡುತ್ತಿದ್ದ ಯುವತಿ ಈ ಗಂಭೀರ ಆರೋಪ ಮಾಡಿದ್ದು, ಕೆಲಸದ ವೇಳೆ ಪ್ರಜ್ಞೆ ತಪ್ಪಿಸುವ ಮಾತ್ರೆ ನೀಡಿ ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ದೂರಿದ್ದಾಳೆ. ಅಲ್ಲದೆ, ಘಟನೆಯ ವಿಡಿಯೋ ಮಾಡಿಕೊಂಡು ಬಳಿಕ ಅದನ್ನು ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿದ್ದಾಳೆ.
ಯುವತಿಯ ದೂರಿನ ಆಧಾರದ ಮೇಲೆ ಕೊಡಿಗೆಹಳ್ಳಿ ಪೊಲೀಸರು ವೈದ್ಯ ಯುವರಾಜ್ ಮನೋಹರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಕುರಿತು ತನಿಖೆ ಮುಂದುವರಿಸಿದ್ದಾರೆ.
ಪ್ರಜ್ಞೆ ತಪ್ಪಿಸುವ ಮಾತ್ರೆ ನೀಡಿ ಅತ್ಯಾಚಾರ? ವೈದ್ಯನ ವಿರುದ್ಧ FIR
124
previous post