

BENGALURU STAMPEDE : ಆರ್‌ಸಿಬಿ ಕಪ್ ಗಳಿಸಿದ ನೆನಪಿಗಾಗಿ ರಾಜ್ಯ ಸರ್ಕಾರ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದರೆ ಈ ಸಂಭ್ರಮಾಚರಣೆ ವೇಳೆ ಭೀಕರ ಕಾಲ್ತುಳಿತದಲ್ಲಿ 13 ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಘಟನೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ‘ಕಾಲ್ತುಳಿತ ಅಥವಾ ಅಂತಹ ಯಾವುದೇ ಪರಿಸ್ಥಿತಿಯನ್ನು ತಪ್ಪಿಸಲು ಸರ್ಕಾರ ರೋಡ್ ಶೋ ನಿಲ್ಲಿಸಿತ್ತು. ಆದರೆ, ಕ್ರೀಡಾಂಗಣದ ಹೊರಗೆ ಕಾಲ್ತುಳಿತ ಸಂಭವಿಸುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಹಾನಿ ನಿಯಂತ್ರಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು’ ಎಂದು ಹೇಳಿದ್ದಾರೆ. ಅದಲ್ಲದೇ ಈ ಘಟನೆ ಬೇರೆ ರಾಜ್ಯಗಳಲ್ಲೂ ಸಂಭವಿಸುವ ಸಾಧ್ಯತೆಗಳಿತ್ತು ಮತ್ತು ಇದಕ್ಕೆ ಆಡಳಿತ ಮಾಡುತ್ತಿರುವ ಪಕ್ಷವನ್ನು ದೂಷಿಸುವುದು ಸರಿಯಲ್ಲ ಅಂದ್ರು.
RCB ವಿಜಯೋತ್ಸವದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದ 13 ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ನೂಕುನುಗ್ಗಲಿನಲ್ಲಿ 18ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, 16 ಮಂದಿಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೌರಿಂಗ್ ಆಸ್ಪತ್ರೆಯಲ್ಲಿ 9 ಅಭಿಮಾನಿಗಳು ಸಾವನ್ನಪ್ಪಿದ್ರೆ, ಅಸ್ವಸ್ಥರಾದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ವೈದೇಹಿ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
16 ಮಂದಿಗೆ ICU ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅದರಲ್ಲಿ 8 ಜನರ ಪರಿಸ್ಥಿತಿ ಗಂಭೀರವಾಗಿದೆ. 8 ಮಂದಿ ಔಟ್ ಆಫ್ ಡೇಂಜರ್ ಎನ್ನಲಾಗಿದೆ. ಅಸ್ವಸ್ಥರಾದವರ ಪರಿಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಇದೆ. ಸಂಬಂಧಿಕರನ್ನು ಕಳೆದುಕೊಂಡ ಸಂಬಂಧಿಕರು ಕಣ್ಣೀರು ಹಾಕುತ್ತಿದ್ದಾರೆ.













