ಶನಿವಾರ, 24 ಅಕ್ಟೋಬರ್ 2026

ಬೆಂಗಳೂರಿನಲ್ಲಿ ಮಂಗಳಮುಖಿಯ ಬರ್ಬರ ಹತ್ಯೆ: ಕತ್ತು ಸೀಳಿ ಕೊಲೆ

Brutal Murder

ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಮಂಗಳಮುಖಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ದೇವಿ ಎಂಬ ಮಂಗಳಮುಖಿಯನ್ನು ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಲಾಗಿದೆ.

ಕಸ್ತೂರಿ ರಂಗನ್ ವರದಿ ವಿರೋಧಿಸಿ ಆಗಸ್ಟ್ 27ರಂದು ಸಾಗರದಲ್ಲಿ ಬೃಹತ್ ಪ್ರತಿಭಟನೆ

ನಸುಕಿನ ಜಾವ ಸುಮಾರು 3 ಗಂಟೆ ವೇಳೆಗೆ ಘಟನೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕಸ್ತೂರಿ ರಂಗನ್ ವರದಿ ವಿರೋಧಿಸಿ ಆಗಸ್ಟ್ 27ರಂದು ಸಾಗರದಲ್ಲಿ ಬೃಹತ್ ಪ್ರತಿಭಟನೆ

ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಮೃತದೇಹವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಹತ್ಯೆಗೆ ನಿಖರ ಕಾರಣ ಹಾಗೂ ಆರೋಪಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.