Home News ಬೆಂಗಳೂರು: ಮಹಿಳೆಯರ ಒಳ ಉಡುಪುಗಳ ಕಳ್ಳತನ ಮಾಡುತ್ತಿದ್ದ ಯುವಕನ ಬಂಧನ

ಬೆಂಗಳೂರು: ಮಹಿಳೆಯರ ಒಳ ಉಡುಪುಗಳ ಕಳ್ಳತನ ಮಾಡುತ್ತಿದ್ದ ಯುವಕನ ಬಂಧನ

Image Credit: Asianet Suvarna Kannada

Hindu neighbor gifts plot of land

Hindu neighbour gifts land to Muslim journalist

ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು ಪೊಲೀಸರು ಬಂಧನ ಮಾಡಿದ್ದಾರೆ. ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಈ ಘಟನೆ ನಡೆದಿದೆ.

ಬಂಧಿತನನ್ನು ಕೇರಳ ಮೂಲದ 23 ರ ಹರೆಯದ ಅಮಲ್‌ ಎಂದು ಗುರುತಿಸಲಾಗಿದೆ.

ಎಲೆಕ್ಟ್ರಾನಿಕ್‌ ಸಿಟಿ ಉಪವಿಭಾಗದ ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಅಮಲ್‌ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ. ಕದ್ದ ಉಡುಪುಗಳನ್ನು ಅಮಲ್‌ ಧರಿಸಿಕೊಳ್ಳುತ್ತಿದ್ದ ಎಂದು ವರದಿಯಾಗಿದೆ.

ಆರೋಪಿಯನ್ನು ಬಂಧನ ಮಾಡಿದ ಪೊಲೀಸರು ಆತನ ಮೊಬೈಲ್‌ ವಶಕ್ಕೆ ಪಡೆದಿದ್ದಾರೆ. ಮೊಬೈಲ್‌ನಲ್ಲಿ ಒಳುಡುಪುಗಳ ಫೋಟೋಗಳಿರುವುದನ್ನು ಕಂಡು ಪೊಲೀಸರೇ ಶಾಕ್‌ ಆಗಿದ್ದಾರೆ ಎನ್ನಲಾಗಿದೆ. ಆರೋಪಿಯ ಮನೆಯಲ್ಲಿಯೂ ಒಳ ಉಡುಪುಗಳು ಪತ್ತೆಯಾಗಿದೆ. ಈ ಕುರಿತು ಹೆಬ್ಬಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯ ವಿಚಾರಣೆ ಮಾಡುತ್ತಿದ್ದಾರೆ.