Prakash Raj: ಸಾಮಾಜಿಕ ಜಾಲತಾಣಗಳಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ), ಖ್ಯಾತ ನಟರಾದ ಪ್ರಕಾಶ್ ರಾಜ್, ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ ಮತ್ತು ಲಕ್ಷ್ಮಿ ಮಂಚು ಅವರಿಗೆ ಸಮನ್ಸ್ ಜಾರಿಗೊಳಿಸಿದೆ.
Sponsoredಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಲ್ಲರಿಗೂ ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ನಟ ರಾಣಾ ದಗ್ಗುಬಾಟಿ ಅವರಿಗೆ ಜುಲೈ 23 ರಂದು, ಪ್ರಕಾಶ್ ರಾಜ್ (Prakash Raj) ಅವರಿಗೆ ಜುಲೈ 30 ರಂದು ಹಾಜರಾಗಲು ಸೂಚಿಸಲಾಗಿದೆ. ಅದೇ ರೀತಿ, ವಿಜಯ್ ದೇವರಕೊಂಡ ಆಗಸ್ಟ್ 6 ರಂದು ಮತ್ತು ಲಕ್ಷ್ಮಿ ಮಂಚು ಆಗಸ್ಟ್ 13 ರಂದು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ಇದನ್ನೂ ಓದಿ: Rape Case: ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ – ಇಂದು ಜಾಮೀನು ಅರ್ಜಿ ವಿಚಾರಣೆ




