Home News Bird Flu: ರಾಜ್ಯದಲ್ಲಿ ಹಕ್ಕಿ ಜ್ವರ ಭೀತಿ; ಪಶುಸಂಗೋಪನೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

Bird Flu: ರಾಜ್ಯದಲ್ಲಿ ಹಕ್ಕಿ ಜ್ವರ ಭೀತಿ; ಪಶುಸಂಗೋಪನೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

Neighbour Rooster

Hindu neighbor gifts plot of land

Hindu neighbour gifts land to Muslim journalist

Bird Flu: ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ ಹೆಚ್ಚುತ್ತಲೇ ಇದೆ. ಪಶುಸಂಗೋಪನೆ ಇಲಾಖೆ (Animal Husbandry) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೇಂದ್ರ ಸರಕಾರ ಗೈಡ್‌ಲೈನ್ಸ್‌ ಬಿಡುಗಡೆ ಮಾಡಿದ ಬೆನ್ನಲ್ಲೇ ರಾಜ್ಯ ಸರಕಾರವು ಇಂದು ಗೈಡ್‌ಲೈನ್ಸ್‌ ಬಿಡುಗಡೆ ಮಾಡಿದೆ.

ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮ:
1. ಸಾರ್ವಜನಿಕರು ಅನಗತ್ಯವಾಗಿ ಕೋಳಿ ಫಾರಂಗೆ ಭೇಟಿ ನೀಡಬಾರದು.
2. ಕೋಳಿ ಫಾರಂನಲ್ಲಿ ಕೆಲಸ ನಿರ್ವಹಿಸುವ ಕೆಲಸಗಾರರು ತಮ್ಮ ಬಟ್ಟೆ, ಶೂ ಹಾಗೂ ಕೈ, ಕಾಲುಗಳಿಗೆ ನಂಜುನಾಶಕ ದ್ರಾವಣ ಸಿಂಪಡಿಸಬೇಕು.
3. ಕೋಳಿ ಸಾಕಾಣಿಕೆಗೆ ಬೇಕಾಗುವ ಸಲಕರಣೆಗಳನ್ನ ಬೇರೆ ಕೋಳಿ ಫಾರಂನಿಂದ ಪಡೆಯಬೇಕಾದರೆ ಸ್ಯಾನಿಟೈಸೇಷನ್ ಮಾಡಬೇಕು ಮತ್ತು ನಂಜುನಾಶಕವನ್ನ ಅಳವಡಿಸಬೇಕು.
4. ಕೋಳಿ ಪಂಜರಗಳನ್ನ ದಿನನಿತ್ಯ ಶುಚಿ ಮಾಡುವುದು. ಆಹಾರ ಮತ್ತು ನೀರನ್ನ ಪ್ರತಿದಿನ ಬದಲಾಯಿಸುವುದು.
5. ಕೋಳಿ ಫಾರಂನಲ್ಲಿ ಬೇರೆ ಹಕ್ಕಿಗಳು ಕೋಳಿಗಳ ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು

ಗೈಡ್‌ಲೈನ್‌ನಲ್ಲಿ ಏನಿದೆ?
ಕೋಳಿ ಸೇವನೆಗೆ ಮಾರ್ಗಸೂಚಿ:
1. 70 ಡಿಗ್ರಿ ಸೆಂಟಿಗ್ರೇಡ್ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಕೋಳಿ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಬಹುದು.
2. ಕೋಳಿ ಮಾಂಸವನ್ನ ಅಡುಗೆಗೆ ತಯಾರು ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು.
3. ಅಡುಗೆಗಾಗಿ ಕೋಳಿಮಾಂಸವನ್ನ ತಯಾರು ಮಾಡಿದ ಬಳಿಕ ನಂಜುನಾಶಕದಿಂದ ಕೈಗಳನ್ನ ಶುಚಿಗೊಳಿಸಿಕೊಳ್ಳಬೇಕು.
4. ಹಸಿ ಕೋಳಿಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆಯನ್ನು, ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು.
5. ಬೇಯಿಸದಿರುವ, ಅರೆಬೆಂದ ಮೊಟ್ಟೆಯನ್ನ ತಿನ್ನಬಾರದು.
6. ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿಯುವುದಿಲ್ಲ