ಶನಿವಾರ, 24 ಅಕ್ಟೋಬರ್ 2026

ಪಶ್ಚಿಮ ಬಂಗಾಳದಲ್ಲಿ ಮ್ಯಾಜಿಕ್‌ ನಂಬರ್‌ ದಾಟಿದ ಬಿಜೆಪಿ

ನವದೆಹಲಿ: ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಎಲ್ಲಾ ರಾಜ್ಯಗಳಲ್ಲಿಯೂ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಹಿನ್ನಡೆಯಲ್ಲಿದ್ದು, ಬಿಜೆಪಿ ಭಾರೀ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದತ್ತ ದಾಪುಗಾಲಿಟ್ಟಿದೆ.

ಪಶ್ಚಿಮ ಬಂಗಾಳದಲ್ಲಿ 169 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಂಗಾಳದಲ್ಲಿ 15 ವರ್ಷದ ಆಳ್ವಿಕೆ ನಡೆಸಿದ್ದ ಮಮತಾ ಬ್ಯಾನರ್ಜಿ ಅವರ ಆಳ್ವಿಕೆ ಈ ಬಾರಿ ಅಂತ್ಯವಾಗಲಿದೆ ಎನ್ನಲಾಗಿದೆ. ಈ ಬಾರಿ ಬಂಗಾಳದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆ ಬಹುತೇಕ ದಟ್ಟವಾಗಿದೆ.

ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ ವಿವರ
ಒಟ್ಟು ವಿಧಾನಸಭಾ ಕ್ಷೇತ್ರಗಳು: 294

ಮತ ಎಣಿಕೆ ಆಗುತ್ತಿರುವುದು: 293

ಬಹುಮತಕ್ಕೆ ಬೇಕಾಗಿರುವುದು: 148 ಸ್ಥಾನ

ಎನ್​ಡಿಎ: 166 ಕ್ಷೇತ್ರಗಳಲ್ಲಿ ಮುನ್ನಡೆ
ಟಿಎಂಸಿ: 101 ಕ್ಷೇತ್ರಗಳಲ್ಲಿ ಮುನ್ನಡೆ
ಕಾಂಗ್ರೆಸ್-ಎಡರಂಗ: 0